ದಕ್ಷಿಣ ಕನ್ನಡ : ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದಲ್ಲಿ ನಡೆದಿದೆ.
ಉದ್ಯಮಿ ಚಂದ್ರಶೇಖರ್ ಎಂಬುವವರು ಬಲೂನ್ ಕಟ್ಟಿಕೊಂಡು ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ನಿರ್ದೇಶಕ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶಾಂತಿಮೊಗರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಧಾರವಾಡದಲ್ಲಿ ಡಬಲ್ ಮರ್ಡರ್
ಧಾರವಾಡ : ಧಾರವಾಡದಲ್ಲಿ ತಡರಾತ್ರಿ ಮಚ್ಚಿನಿಂದ ಕೊಚ್ಚಿ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ಹತ್ಯೆ ಮಾಡಿದ ಭೀಕರ ಘಟನೆ ನಡೆದಿದೆ.
ಧಾರವಾಡ ನಗರದ ಕಮಲಾಪುರ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಮಹಮದ್ ಕುಡಚಿ ಸೇರಿ ಇಬ್ಬರನ್ನು ಹತ್ಯೆ ಮಾಡಲಾಗಿದೆ. ಮನೆ ಮುಂದೆ ಕುಳಿತಿದ್ದ ಮಹಮದ್ ಮೇಲೆ ಮಚ್ಚಿನಿಂದ ದಾಳಿ ನಡೆಸಿದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆಗೆ ನಿಖರ ಕಾರಣ ತಿಳುದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಹುಧಾ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಭೇಟಿ ನೀಡಿದ್ದಾರೆ. ಧಾರವಾಡ ಉಪನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ತೆಲಂಗಾಣ: ತನ್ನ ಗುದನಾಳದಲ್ಲಿಟ್ಟುಕೊಂಡು 42 ಲಕ್ಷ ರೂ. ಮೌಲ್ಯದ ಚಿನ್ನ ಸಾಗಿಸ್ತಿದ್ದ ವ್ಯಕ್ತಿ ಅರೆಸ್ಟ್
CRIME NEWS : ಬೆಂಗಳೂರು, ಮಂಡ್ಯದಲ್ಲಿ ಹರಿದ ನೆತ್ತರು : ಕ್ಷುಲ್ಲಕ ಕಾರಣಕ್ಕೆ ಇಬ್ಬರು ಯುವಕರ ಬರ್ಬರ ಹತ್ಯೆ