ಹಾಸನ: ಜಿಲ್ಲೆಯ ಹೇಮಾವತಿ ನದಿ ನಾಲೆಗೆ ಕಾರೊಂದು ಉರುಳಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿ, ಮತ್ತಿಬ್ಬರು ಕೊಚ್ಚಿ ಹೋಗಿರುವಂತ ಶಂಕೆ ವ್ಯಕ್ತವಾಗಿದೆ.
ಹಾಸನದ ಹೊಳೆನರಸೀಪುರ ಬಳಿಯ ಹರಳಹಳ್ಳಿ ಗ್ರಾಮದಲ್ಲಿ ಹೇಮಾವತಿಯ ಎಡದಂಡೆ ನಾಲೆಗೆ ಕಾರೊಂದು ಉರುಳಿ ಬಿದ್ದಿದೆ. ಈ ಪರಿಣಾಮ ಕಾರಿನಲ್ಲಿದ್ದಂತ ನಾಲ್ವರಲ್ಲಿ ಇಬ್ಬರು ಸಾವನ್ನಪ್ಪಿದದರೇ, ಮತ್ತಿಬ್ಬರು ಕೊಚ್ಚಿ ಹೋಗಿರುವುದಾಗಿ ಹೇಳಲಾಗುತ್ತಿದೆ.
ನದಿ ನಾಲೆಯಲ್ಲಿ ಕಾರೊಂದು ಕಂಡಂತ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಪರಿಶೀಲಿಸಿದ್ದಾರೆ. ಕಾರು ಪತ್ತೆಯಾದ ಸಮೀಪದ ದೊಡ್ಡಕುಂಚೇವು ಗ್ರಾಮದ ಕೆರೆಯಲ್ಲಿ ಓರ್ವ ಪುರುಷ ಹಾಗೂ ಮಹಿಳೆಯ ಶವ ಪತ್ತೆಯಾಗಿದೆ. ಕಾರಿನಲ್ಲಿ ಇನ್ನಿಬ್ಬರು ಕೊಚ್ಚಿ ಹೋಗಿದ್ದಾರೆ ಎನ್ನಲಾಗುತ್ತಿದೆ. ಅವರ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ಸಂಬಂಧ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
SHOCKING: ಋತುಚಕ್ರ ನಿಲ್ಲಿಸಲು ಮಾತ್ರೆ ಸೇವಿಸಿದ ವಿದ್ಯಾರ್ಥಿನಿ ಸಾವು | Period-Delaying Pills Side Effects
BIG NEWS : ಸಂದರ್ಭ ಬಂದಾಗ ಡಿಸಿಎಂ ಡಿಕೆ ಶಿವಕುಮಾರ್ ‘CM’ ಆಗ್ತಾರೆ : ಸಚಿವ ಚೆಲುವರಾಯಸ್ವಾಮಿ ಹೇಳಿಕೆ