ಬೆಂಗಳೂರು : ಲೋಕಸಭಾ ಚುನಾವಣೆ ವೇಳೆ ಮತಗಳ್ಳತನ ನಡೆದಿದೆ ಗಂಭೀರ ಆರೋಪ ಮಾಡಿದ್ದರು. ಈ ವಿಚಾರವಾಗಿ ಎಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಎಕ್ಸ್ ಮೂಲಕ ಕಿಡಿಕಾರಿದ್ದಾರೆ.
ಗುರುವಾರ ರಾಹುಲ್ಗಾಂಧಿ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಲೋಕಸಭಾ ಚುನಾವಣೆ ವೇಳೆ ಮತಗಳ್ಳತನ ನಡೆದಿದೆ ಗಂಭೀರ ಆರೋಪ ಮಾಡಿದ್ದರು. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಅವರು, ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಹಾಗೂ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ ಮಾಡುತ್ತಿದ್ದಾರೆ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ ಪಡೆಯುವ ಕಿಡಿಗೇಡಿಗಳ ಪಿತೂರಿ ನಡೆಯುತ್ತಿದೆ. ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೂಬೆಲ್ ರಾಜಕಾರಣ. ಮತಗಳ್ಳತನಕ್ಕೆ ಒಂದೇ ಮದ್ದು. ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ ಎಂದಿದ್ದಾರೆ. ಕೇಂದ್ರೀಯ ಚುನಾವಣೆ ಆಯೋಗಕ್ಕೆ ನನ್ನ ಮನವಿ ಅಥವಾ ಒತ್ತಾಯ ಇಷ್ಟೇ, ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದು ಹೇಳಿದ್ದಾರೆ.
ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ.
ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ (Benefit of the doubt) ಪಡೆಯುವ ಕಿಡಿಗೇಡಿ ಪಿತೂರಿ.
ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2025