ಶಿವಮೊಗ್ಗ: ಶಿವಮೊಗ್ಗ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಗೆ ಕಾಲೇಜಿನ ಸಹ ಪ್ರಾಧ್ಯಾಪಕನಿಂದಲೇ ಲೈಂಗಿಕ ಕಿರುಕುಳ ನೀಡಿದಂತ ಆರೋಪ ಕೇಳಿ ಬಂದಿದೆ.
ಶಿವಮೊಗ್ಗ ಮೆಡಿಕಲ್ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಅಶ್ವಿನ್ ಹೆಬ್ಬಾರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಡಾ.ಅಶ್ವಿನ್ ಹೆಬ್ಬಾರ್ ಸರ್ಜರಿ ವಿಭಾಗದ ಸಹ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಸಹ ಪ್ರಾಧ್ಯಾಪಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದರ ಸಂಬಂಧ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರನ್ನು ಸಂತ್ರಸ್ತೆ ದಾಖಲಿಸಿದ್ದಾರೆ.
ಇತ್ತ ಆರೋಪ ಕೇಳಿ ಬರುತ್ತಿದ್ದಂತೆ ಡಾ.ಅಶ್ವಿನ್ ಹೆಬ್ಬಾರ್ ಅವರು ಕರ್ತವ್ಯಕ್ಕೆ ಗೈರಾಗಿ ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆಯೂ ಡಾ.ಅಶ್ವಿನ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ 3 ತಿಂಗಳು ಅಮಾನತು ಕೂಡ ಸಹ ಪ್ರಾಧ್ಯಾಪಕ ಡಾ.ಅಶ್ವಿನ್ ಹೆಬ್ಬಾರ್ ಗೊಂಡಿದ್ದರು.
ಕಾಲೇಜಿನ ಆಂತರಿಕ ತನಿಖಾ ವರದಿ, ಪೊಲೀಸ್ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದಾಗಿ ಸಿಮ್ಸ್ ಆಡಳಿತಾಧಿಕಾರಿ ಉಮಾ ಡಿ ಸದಾಶಿವ ತಿಳಿಸಿದ್ದಾರೆ.
ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ 80 ಸಾವಿರ ಕೋಟಿಗಳ ನಷ್ಟ: ಸಿಎಂ ಸಿದ್ಧರಾಮಯ್ಯ
BREAKING : 2 ದಿನದಲ್ಲಿ ರಾಜೀನಾಮೆ ಕೊಡಬಹುದು: ಶಾಸಕ ರಾಜು ಕಾಗೆ ಎಚ್ಚರಿಕೆಗೆ CM ಸಿದ್ದರಾಮಯ್ಯ ಹೇಳಿದ್ದೇನು?