ಬೆಂಗಳೂರು: ರೈತ ಸಂಘಟನೆಗಳು ರೈತ ಹುಡುಗನನ್ನು ಮದುವೆಯಾಗುವ ಯುವತಿಗೆ 5 ಲಕ್ಷ ರೂ. ನೀಡಿ ಅಂತ ಮನವಿ ಮಾಡಿಕೊಂಡಿದ್ದಾವೆ. ವೃತ್ತಿಯಲ್ಲಿ ರೈತನಾದ ಹುಡುಗನನ್ನು ಮದುವೆಯಾಗುವ ಯುವತಿಗೆ ರಾಜ್ಯ ಸರ್ಕಾರದಿಂದ 5 ಲಕ್ಷರೂ. ಪ್ರೋತ್ಸಾಹಧನ ನೀಡಬೇಕು ಎಂದು ರೈತ ಸಂಘಟನೆಗಳ ಪ್ರತಿನಿಧಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಭಾನುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘಟನೆ ಹಾಗೂ ಮುಖಂಡರುಗಳ ಸಭೆ ನಡೆಸಿದ ವೇಳೆಯಲ್ಲಿ ಘಟನೆ ನಡೆದಿದೆ. ಈ ವೇಳೆ ಮಾತನಾಡಿದ ಬಡಗಲಪುರ ನಾಗೇಂದ್ರ, ‘ಕೃಷಿ ಮಾಡುವವರ ಮಕ್ಕಳಿಗೆ ಇಂದು ಹೆಣ್ಣು ಕೊಡುತ್ತಿಲ್ಲ. 45 ವರ್ಷವಾದರೂ ವಿವಾಹವಾಗುತ್ತಿಲ್ಲ. ಇದರಿಂದಾಗಿ ಕೃಷಿಗೂ ಆದ್ಯತೆ ಸಿಗುತ್ತಿಲ್ಲ. ಹಾಗಾಗಿ, ರೈತನನ್ನು ವಿವಾಹವಾಗುವ ಹುಡುಗಿಗೆ ಪ್ರೋತ್ಸಾಹ ಧನ ನೀಡಬೇಕು’ ಎಂದು ಮನವಿ ಮಾಡಿದರು.