ನವದೆಹಲಿ: ಫಟಾದಿಂದ ಕೇದಾರನಾಥ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಆರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರ ಎನ್ನಲಾಗಿದೆ. ಅವಘಡಕ್ಕೆ ಈಡಾದ ಹೆಲಿಕಾಪ್ಟರ್ನಲ್ಲಿ ಎಂಟು ಮಂದಿ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದ್ದು, ಆರುಮಂದಿ ಸಾವನ್ನಪ್ಪಿದ್ದಾರೆ. ಘಟನೆ ಸ್ಥಳಕ್ಕೆ ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಸ್ಥಳಕ್ಕೆ ತೆರಳಿದೆ.
ಪ್ರತಿಕೂಲ ಹವಾಮಾನದಿಂದಾಗಿ, ಗರುಡಚಟ್ಟಿ ಬಳಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕೇದಾರನಾಥಕ್ಕೆ ಭೇಟಿ ನೀಡಿ ಭಕ್ತರು ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ರುದ್ರಪ್ರಯಾಗದಿಂದ 2 ಕಿ.ಮೀ ದೂರದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಅಪಘಾತದ ಸ್ಥಳದಲ್ಲಿ ದಟ್ಟವಾದ ಮಂಜು ಕವಿದಿದೆ. ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಸ್ಥಳದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿವೆ. ಈ ವಿಷಯದಲ್ಲಿ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ
ಮೂಲಗಳ ಪ್ರಕಾರ, ಅಪಘಾತಕ್ಕೀಡಾದ ಹೆಲಿಕಾಪ್ಟರ್ ನಲ್ಲಿ ಆರು ಪ್ರಯಾಣಿಕರು ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಈ ಘಟನೆಗೆ ಕಾರಣ ದಟ್ಟ ಮಂಜು ಎಂದು ಹೇಳಲಾಗಿದೆ. .