ಚಿತ್ರದುರ್ಗ: ಜಿಲ್ಲೆಯ ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿಯೊಂದಕ್ಕೆ ಹಿಂಬದಿಯಿಂದ ಕಾರೊಂದು ಡಿಕ್ಕಿಯಾದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಬಳಿಯ ಉಪಾಧ್ಯಾ ಹೋಟೆಲ್ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾರೊಂದು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಮುಂದೆ ಸಾಗುತ್ತಿದ್ದಂತ ಲಾರಿಯೊಂದಕ್ಕೆ ಹಿಂಬದಿಯಾಗಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ತಮಿಳುನಾಡು ನೋಂದಣಿ ಸಂಖ್ಯೆ ಹೊಂದಿರುವಂತ ಕಾರಿನಲ್ಲಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಕಾರಿನಲ್ಲಿ ಇದ್ದಂತ ಮತ್ತೋರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಐಮಂಗಳ ಠಾಣೆಯ ಪೊಲೀಸ್ ಸಬ್ ಇನ್ಸ್ ಸ್ಪೆಕ್ಟರ್ ದೀಪು, ಭೀಮನಗೌಡ ಪಾಟೀಲ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಲ್ಲದೇ ನಜ್ಜು ಗುಜ್ಜಾಗಿದ್ದಂತ ಕಾರಿನಲ್ಲಿ ಸಿಲುಕಿದ್ದಂತ ಮಹಿಳೆಯ ಮೃತದೇಹವನ್ನು ಹೊರ ತೆಗೆಯುವ ಕೆಲಸ ಮಾಡಿದರು. ಜೊತೆಗೆ ಗಂಭೀರವಾಗಿ ಗಾಯಗೊಂಡಿದ್ದಂತ ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ನೆರವಾಗಿದ್ದಾರೆ. ಮೃತರ ಬಗ್ಗೆ ಮಾಹಿತಿ ತಿಳಿದು ಬರಬೇಕಿದೆ. ಪೊಲೀಸರು ಮೃತರು, ಗಾಯಾಳು ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಸಂಬಂಧ ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ; ವಸಂತ ಬಿ ಈಶ್ವರಗೆರೆ… ಸಂಪಾದಕರು..
ರಾಜ್ಯದ AC, DC ಕಚೇರಿಗಳಲ್ಲೂ ಭೂ ದಾಖಲೆ ಡಿಜಿಟಲೀಕರಣ: ಸಚಿವ ಕೃಷ್ಣ ಬೈರೇಗೌಡ








