ಹಾಸನ : ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಇದೀಗ ಶಿರಾಡಿ ಘಾಟ್ ತಿರುವಿನಲ್ಲಿ ಸರ್ಕಾರಿ ಬಸ್ ಹಾಗೂ ಕಂಟೇನರ್ ನಡುವೆ ಭೀಕರ ಅಪಘಾತವಾಗಿದ್ದು, ಅದೃಷ್ಟವಶಾತ್ ಬಸ್ ನಲ್ಲಿದ್ದ ಎಲ್ಲಾ ಪ್ರಯಾಣಿಕರು ಬಚಾವಾಗಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಮಂಗಳೂರಿನಿಂದ ಬೆಂಗಳೂರಿಗೆ ಕಂಟೇನರ್ ವಾಹನ ತೆರಳುತ್ತಿತ್ತು. ಸಕಲೇಶಪುರದಿಂದ ಸರ್ಕಾರಿ ಬಸ್ ಬೆಂಗಳೂರಿನ ಕಡೆಗೆ ತೆರಳುತ್ತಿತ್ತು.
ಇಳಿಜಾರಿನ ತಿರುವಿನಲ್ಲಿ ವೇಗವಾಗಿ ಬಂದು ಸರ್ಕಾರಿ ಬಸ್ ಅಡಿಕೆ ಹೊಡೆದಿದೆ. ನಿಯಂತ್ರಣಕ್ಕೆ ಸಿಗದೇ ಕಂಟೇನರ್ ಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಿಂದ NH 75 ರಲ್ಲಿ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೂಡಲೇ ಸಿಬ್ಬಂದಿಗಳು ಪ್ರಯಾಣಿಕರನ್ನು ಬೇರೆ ಬಸ್ ಗಳಲ್ಲಿ ತೆರಳುವ ವ್ಯವಸ್ಥೆ ಮಾಡಿದರು. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.