ಧಾರವಾಡ : ಧಾರವಾಡ ದಲ್ಲಿ ಲಾರಿ ಕಾರಿನ ಮಧ್ಯ ಭೀಕರವಾದ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಓರ್ವ ವ್ಯಕ್ತಿ ಸಾವನಪ್ಪಿದ್ದು, ಮೂವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಧಾರವಾಡ ತಾಲೂಕಿನ ಅಮ್ಮಿನಭಾವಿ ಬಳಿ ಸಂಭವಿಸಿದೆ.
ಮೂಡಲಗಿ ತಾಲೂಕಿನ ವಿಠಲ ಗಾಣಿಗೇರ (40) ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದು, ಧಾರವಾಡ ಕೃಷಿ ಮೇಳಕ್ಕೆ ಆಗಮಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ನು ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.