ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಬಲೇಗಾರು ಬಳಿಯಲ್ಲಿ ಒಮಿನಿ ಹಾಗೂ ಬುಲೆರೋ ಪಿಕಪ್ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಈ ಕುರಿತಂತೆ ಕನ್ನಡ ನ್ಯೂಸ್ ನೌ ಜೊತೆಗೆ ಮಾಹಿತಿ ಹಂಚಿಕೊಂಡ ಸಾಗರ ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಮಹಾಬಲೇಶ್ವರ್ ಅವರು ಶಿವಮೊಗ್ಗ ಜಿಲ್ಲೆಯ ಸಾಗರದ ಬಲೇಗಾರುವಿನಲ್ಲಿ ಒಮಿನಿ ಹಾಗೂ ಪಿಕಪ್ ವಾಹನದ ನಡುವೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಒಮಿನಿಯಲ್ಲಿದ್ದಂತ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎನ್ ಆರ್ ಪುರದ ಶೇಖರಪ್ಪ ಎಂಬುದಾಗಿ ತಿಳಿದು ಬಂದಿದೆ ಎಂದಿದ್ದಾರೆ.
ಇನ್ನೂ ಒಮಿನಿ ಹಾಗೂ ಪಿಕಪ್ ನಡುವಿನ ಅಪಘಾತದಲ್ಲಿ ಆರು ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಇನ್ನುಳಿದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಎಲ್ಲಾ ಗಾಯಾಳುಗಳನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿ ಚಿಕಿತ್ಸೆ ಕೊಡಿಸಿ, ಶಿವಮೊಗ್ಗಕ್ಕೆ ಶಿಫ್ಟ್ ಮಾಡಲಾಗಿದೆ. ಇನ್ನೂ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ ಎಂದರು.
ಅಪಘಾತದ ವಿಷಯ ತಿಳಿದು ಸ್ಥಳಕ್ಕೆ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಭೇಟಿ ನೀಡಿ, ಗಾಯಾಳುಗಳಿಗೆ ಚಿಕಿತ್ಸೆಯನ್ನು ಮುಂದೆ ನಿಂತು ಕೊಡಿಸುತ್ತಿದರು. ಈ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
ಬೋಳು ತಲೆ, ಸುಕ್ಕು ಗಟ್ಟಿದ ಮುಖದಲ್ಲಿ ದರ್ಶನ್, ನಗುವಿನಲ್ಲಿ ಪವಿತ್ರಾ: ‘ಡಿ ಬಾಸ್’ ಗ್ಯಾಂಗ್ ಹೊಸ ಪೋಟೋ ರಿಲೀಸ್
ಶಾಸಕ ಶಿವಗಂಗಾಗೆ ನೋಟಿಸ್ ನೀಡಲಾಗುವುದು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್