ಮಂಡ್ಯ : ಮಂಡ್ಯದಲ್ಲಿ ಘೋರ ದುರಂತವೊಂದು ನಡೆದಿದ್ದು, ಬಸ್ ನಿಲ್ದಾಣದ ಬಳಿಯೇ ವ್ಯಕ್ತಿಯ ಮೇಲೆ KSRTC ಬಸ್ ಒಂದು ಹರಿದ ಘಟನೆ ಮಂಡ್ಯ ಜಿಲ್ಲೆಯ KR ಪೇಟೆ ತಾಲೂಕಿನಲ್ಲಿ ನಡೆದಿದೆ.
ಘಟನೆಯಲ್ಲಿ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಮಂಡ್ಯದ K.R ಪೇಟೆ ಪಟ್ಟಣದ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಗಾಯಗೊಂಡ ವ್ಯಕ್ತಿಯ ಹೆಸರು ತಿಳಿದು ಬಂದಿಲ್ಲ. ತಕ್ಷಣ ಸ್ಥಳೀಯರಿಂದ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.








