ಮಡಿಕೇರಿ : ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಈ ಎರಡೂ ಸಂಸ್ಥೆಗಳು ಒಟ್ಟಾಗಿ ನವೆಂಬರ್ 01, 1985 ರಿಂದ ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲ ಸರ್ಕಾರಿ ನೌಕರರಿಗಾಗಿ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯೊಂದನ್ನು ನಡೆಸುತ್ತಿವೆ. ಇದಕ್ಕೆ ಕರ್ನಾಟಕದಲ್ಲಿರುವ ಎಲ್ಲ ನಗರಸಭೆ, ಕ.ವಿ.ಪ್ರ.ನಿ.ನಿ., ಕೆ.ಎಸ್.ಆರ್.ಟಿ.ಸಿ., ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳ ನೌಕರರು ಸಹ ನೊಂದಾಯಿಸಿಕೊಳ್ಳಬಹುದು.
ಕರ್ನಾಟಕ ಸರ್ಕಾರಿ ನೌಕರರು ಸಂಪರ್ಕ ಶಿಬಿರ ಹಾಗೂ ಪರೀಕ್ಷೆಗಳಿಗೆ ಹಾಜರಾಗುವಾಗಿನ ಅವರ ಕಚೇರಿ ಗೈರು ಹಾಜರಿಯನ್ನು ಅನ್ಯ ಕಾರ್ಯನಿಮಿತ್ತ ಎಂದು ಪರಿಗಣಿಸಲಾಗುವುದು. ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ನೋಂದಾಯಿಸಿಕೊಂಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ಕರ್ನಾಟಕ ಸರ್ಕಾರದ ಅಧಿಸೂಚನೆ ಸಿಅಸುಇ 39:ಸೆಸೆವಿ: 87(1), ದಿನಾಂಕ 13ನೇ ಫೆಬ್ರವರಿ 1989 (ಕರ್ನಾಟಕ ರಾಜ್ಯಪತ್ರ ಭಾಗ-4, 2ಸಿ(1).ಮಾರ್ಚಿ 23, 1989, ಪುಟ 119)ರಲ್ಲಿ ತಿಳಿಸಿರುವಂತೆ ವಿನಾಯಿತಿಯಿದೆ.
ಈ ಯೋಜನೆಯನ್ನು ಈಗ ಸಾರ್ವಜನಿಕರಿಗೂ ವಿಸ್ತರಿಸಲಾಗಿದೆ. ಇವರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ವಯೋಮಿತಿ 18 ರಿಂದ 50 ವಯಸ್ಸಿನ ಒಳಗಿರಬೇಕು. ಆಸಕ್ತರು ಭರ್ತಿ ಮಾಡಿದ ಅರ್ಜಿಯ ಜೊತೆಯಲ್ಲಿ ರೂ 250 ಡಿಮ್ಯಾಂಡ್ ಡ್ರಾಫ್ಟ್‍ನ್ನು ಕಳುಹಿಸಿ ಕೊಡಬೇಕು. ನೋಂದಣಿತರಿಗೆ ಇಪ್ಪತ್ತು ಪಾಠಾವಳಿಗಳನ್ನು ಕಳುಹಿಸಿಕೊಡಲಾಗುವುದು. ತರಬೇತಿ ಮತ್ತು ಸಂಪರ್ಕ ಶಿಬಿರದ ಅಂತ್ಯದಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು.
ಮೂವತ್ತೆಂಟನೆಯ ತಂಡದ ತರಬೇತಿಯು ಇದೇ ಡಿಸೆಂಬರ್ ತಿಂಗಳಿಂದ ಆರಂಭವಾಗಲಿದೆ. ಅರ್ಜಿ ನಮೂನೆ ಮತ್ತು ತರಬೇತಿ ವಿವರಗಳನ್ನು ಪ್ರಭಾರಿ ಅಧಿಕಾರಿ, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು-570006, ದೂ.ಸಂ 0821-2345128 ಇವರಿಗೆ ಐದು ರೂಪಾಯಿಯ ಅಂಚೆ ಚೀಟಿಯನ್ನು ಹಚ್ಚಿದ ಸ್ವವಿಳಾಸಿತ ಲಕೋಟೆಯನ್ನು ಕಳುಹಿಸಿ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳು ಪ್ರಭಾರಿ ಅಧಿಕಾರಿಯವರಿಗೆ ನವೆಂಬರ್ 30 2025 ಒಳಗೆ ತಲುಪಬೇಕು. ಹೆಚ್ಚಿನ ಮಾಹಿತಿಗೆ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಬೆಂಗಳೂರು ಇಲ್ಲಿ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕಂತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ತಿಳಿಸಿದ್ದಾರೆ.