ಚಾಮರಾಜನಗರ : ಚಾಮರಾಜನಗರದಲ್ಲಿ ಮತ್ತೆ ಚಿರತೆ ಉಪಟಳ ಶುರುವಾಗಿದ್ದು, ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವಾಗ ಭಕ್ತರಿಗೆ ಚಿರತೆ ಪ್ರತ್ಯಕ್ಷವಾಗಿದೆ.
ಮಲೆ ಮಹದೇಶ್ವರ ಬೆಟ್ಟದ ಆರನೇ ತಿರುವಿನಲ್ಲಿ ಭಕ್ತರಿಗೆ ಚಿರತೆ ಒಂದು ಪ್ರತ್ಯಕ್ಷವಾಗಿದೆ. ಭಕ್ತರು ತಮ್ಮ ಮೊಬೈಲ್ ಗಳಲ್ಲಿ ಚಿರತೆಯ ಫೋಟೋಗಳನ್ನು ಸೆರೆ ಹಿಡಿದಿದ್ದಾರೆ. ಶಿವರಾತ್ರಿ ಜಾತ್ರೆಯ ವೇಳೆ ಓರ್ವ ಭಕ್ತನನ್ನು ಚಿರತೆ ಕೊಂದಿತ್ತು. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು ಭಕ್ತರಲ್ಲಿ ಆತಂಕ ಸೃಷ್ಟಿಯಾಗಿದೆ.








