ಬೆಂಗಳೂರು: ಇಂದು ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕವನ್ನು ರಾಜ್ಯ ಸರ್ಕಾರ ಮಂಡಿಸಲಾಗಿತ್ತು. ಈ ಬಿಲ್ ಅನ್ನು ಮತಕ್ಕೆ ಹಾಕಲಾಗಿದ್ದು, ಅತಿ ಹೆಚ್ಚು ಮತಗಳು ಬಿಲ್ ವಿರೋಧಿಸಿ ವ್ಯಕ್ತವಾಗಿದ್ದಾವೆ. ಈ ಮೂಲಕ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ವಿಧಾನ ಪರಿಷತ್ತಿನಲ್ಲಿ ತಿರಸ್ಕಾರಗೊಂಡು ಸರ್ಕಾರಕ್ಕೆ ಭಾರೀ ಮುಖಭಂಗವಾದಂತೆ ಆಗಿದೆ.
ವಿಧಾನ ಪರಿಷತ್ತಿನಲ್ಲಿ ರಾಜ್ಯ ಸರ್ಕಾರದಿಂದ ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲಾಗಿತ್ತು. ಇದಕ್ಕೆ ವಿಪಕ್ಷಗಳಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಅಲ್ಲದೇ ಮತಕ್ಕೆ ಹಾಕುವಂತೆ ಒತ್ತಾಯ ಕೇಳಿಬಂದಿತ್ತು.
ಈ ಹಿನ್ನಲೆಯಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ಬಿಲ್ ಅನ್ನು ಮತಕ್ಕೆ ಹಾಕಲಾಯಿತು. ಈ ವೇಳೆ ಬಿಲ್ ಪರವಾಗಿ 24 ಮತಗಳು ಬಿದ್ದರೇ, ಬಿಲ್ ವಿರೋಧಿಸಿ 26 ಮತಗಳನ್ನು ಚಲಾಯಿಸಲಾಗಿದೆ. ಹೀಗಾಗಿ ಬಿಲ್ ವಿರೋಧಿಸಿ ಅತಿ ಹೆಚ್ಚು ಮತಗಳು ಬಿದ್ದ ಪರಿಣಾಮ, ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ತಿರಸ್ಕಾರಗೊಂಡಂತೆ ಆಗಿದೆ.
ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪ: ಯೂಟ್ಯೂಬರ್ ವಿರುದ್ಧ EDಗೆ ದೂರು
ಸಾಗರ, ಹೊಸನಗರದಲ್ಲಿ ಅಭಿವೃದ್ಧಿ ಪರ್ವಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ನಾಂದಿ: 1 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ
ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ