ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಜಲಾಶಯವು ಸತತ ನಾಲ್ಕನೇ ಬಾರಿಗೆ ಕೋಡಿ ಬಿದ್ದಿದೆ. ಡ್ಯಾಂ ಭರ್ತಿಯಾಗಿ ಕೋಡಿಯಲ್ಲಿ ನೀರು ಹರಿದು ಹೋಗುತ್ತಿರುವುದನ್ನು ನೋಡುವುದಕ್ಕೆ ಜನರ ದಂಡೇ ಹರಿದು ಬರುತ್ತಿದೆ. ಆದರೇ ಹೀಗೆ ಕೋಡಿ ನೀರಿನಲ್ಲಿ ಆಡುತ್ತಿದ್ದಂತ ವೇಳೆಯಲ್ಲೇ ವ್ಯಕ್ತಿಯೊಬ್ಬ ಕೊಚ್ಚಿ ಹೋದ ಬಳಿಕ, ಪೊಲೀಸರು ರಕ್ಷಣೆ ಮಾಡಿರುವಂತ ಆಘಾತಕಾರಿ ಘಟನೆ ನಡೆದಿದೆ.
ಇಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಿವಿ ಸಾಗರ ಜಲಾಶಯ ನಾಲ್ಕನೇ ಬಾರಿಗೆ ಕೋಡಿಬಿದ್ದಿದ್ದು, ಕೋಡಿ ವೀಕ್ಷಣೆಗೆ ಪ್ರವಾಸಿಗರು ಮುಗಿಬಿದ್ದಿದ್ದಾರೆ.
ಭಾನುವಾರದ ಇಂದು ಕೋಡಿ ಜಾಗದಲ್ಲಿ ಸಾರ್ವಜನಿಕರು ವೀಕ್ಷಣೆ ಮಾಡುತ್ತಿರುವ ಸಂದರ್ಭದಲ್ಲಿ ಪ್ರವಾಸಿಗನೊಬ್ಬ ನೀರಿನಲ್ಲಿ ಇಳಿದು ಉಚ್ಛಾಟ ಮೆರೆದ ಹಿನ್ನೆಲೆಯಲ್ಲಿ ಹೊರಹರಿವಿನ ಕೊಡೆತಕ್ಕೆ ಕೊಚ್ಚಿ ಹೋಗಿರುವಂತ ದೃಶ್ಯ ಪ್ರವಾಸಿಗರ ಮೊಬೈಲ್ ನಲ್ಲಿ ಸೆರೆಯಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿಯನ್ನು ರಕ್ಷಿಸಿದ್ದಾರೆ.
ಕೊಡಿ ಜಾಗದಲ್ಲಿ ಸಾರ್ವಜನಿಕ ಹೋಗದಂತೆ ಇದೀಗ ಸಮಾನ ಪಟ್ಟ ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಎಚ್ಚರ ವಹಿಸಿದ್ದಾರೆ. ಅಲ್ಲದೆ ಸಾರ್ವಜನಿಕರು ನೀರಿನಲ್ಲಿ ಇಳಿಯದಂತೆ ಎಚ್ಚರ ವಹಿಸಬೇಕು ಎಂದು ಪೊಲೀಸ್ ಇಲಾಖೆಯು ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ವರದಿ; ವಸಂತ ಬಿ ಈಶ್ವರಗೆರೆ…, ಸಂಪಾದಕರು
ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದಲ್ಲಿ 11,200 ನಕಲಿ ಮತದಾರರಿದ್ದಾರೆ: ಸಚಿವ ದಿನೇಶ್ ಗುಂಡೂರಾವ್ ಹೊಸ ಬಾಂಬ್
ALERT : ನೀವು ಸೇವಿಸುವ `ಮಾತ್ರೆಗಳು’ ಅಸಲಿಯೋ ನಕಲಿಯೋ? ಜಸ್ಟ್ ಈ ರೀತಿ ಚೆಕ್ ಮಾಡಿಕೊಳ್ಳಿ.!








