ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡದ ಸ್ಲ್ಯಾಬ್ ಕುಸಿದು ಗಾರಿ ಮೇಸ್ತ್ರಿ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ಬೆಂಗಳೂರು: ನಗರದಲ್ಲಿ ಇಂದು ನಿರ್ಮಾಣ ಹಂತದ ಕಟ್ಟಡದ ಸ್ಲ್ಯಾಬ್ ಕುಸಿತಗೊಂಡ ಪರಿಣಾಮವಾಗಿ ಗಾರೆ ಕೆಲಸದ ಮೇಸ್ತ್ರಿ ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಇದೇ ದುರಂತದಲ್ಲಿ ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೆಂಗಳೂರಿನ ಸಂಪಿಗೆಹಳ್ಳಿಯ ಅಗ್ರಹಾರದಲ್ಲಿ ನಿರ್ಮಾಣ ಹಂತದ ಕಟ್ಟಡದ ಸ್ಲ್ಯಾಬ್ ಕುಸಿತಗೊಂಡಿದೆ. ಈ ದುರ್ಘಟನೆಯಲ್ಲಿ ಬಿಹಾರ ಮೂಲದ ಗಾರೆ ಮೇಸ್ತ್ರಿ ಶಕಲ್ ದಾಸ್(35) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಈ ದುರಂತದಲ್ಲಿ ಮತ್ತೋರ್ವ ಕಾರ್ಮಿಕ ನೀರಜ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. … Continue reading ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡದ ಸ್ಲ್ಯಾಬ್ ಕುಸಿದು ಗಾರಿ ಮೇಸ್ತ್ರಿ ಸಾವು, ಮತ್ತೋರ್ವನಿಗೆ ಗಂಭೀರ ಗಾಯ