ಮಂಡ್ಯ: ಮಾಜಿ ಶಾಸಕರ ಊರಿಂದ ಹಾಲಿ ಶಾಸಕರ ಹುಟ್ಟೂರಿಗೆ ಪೊಲೀಸ್ ಠಾಣೆ ಶಿಫ್ಟ್ ವಿರೋಧಿಸಿ ಬೀದಿಗಿಳಿದಿದ್ದಾರೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ ವಿರುದ್ದ ಚಿನಕುರುಳಿ ಗ್ರಾಮಸ್ಥರು ರೊಚ್ಚಿಗೆದ್ದಿದ್ದಾರೆ. ಅಲ್ಲದೇ ಚಿನಕುರುಳಿ ಗ್ರಾಮ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಚಿನಕುರುಳಿ ಗ್ರಾಮಸ್ಥರು ಇಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹುಟ್ಟೂರು ಕ್ಯಾತನಹಳ್ಳಿಗೆ ಪೊಲೀಸ್ ಠಾಣೆ ಶಿಫ್ಟ್ ಮಾಡಲು ನಿರ್ಧಾರವನ್ನು ವಿರೋಧಿಸಿ, ಬೃಹತ್ ಪ್ರತಿಭಟನೆ ನಡೆಸಿದರು. ಶಾಸಕರ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಚಿನಕುರುಳಿಯಲ್ಲಿದ್ದ ಉಪ ಪೊಲೀಸ್ ಠಾಣೆಯನ್ನು ಮೇಲ್ದರ್ಜೆಗೆರಿಸಲು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮನವಿ ಮಾಡಿದ್ದರು. ಹೆಚ್ ಡಿ ಕುಮಾರಸ್ವಾಮಿ ಮನವಿಗೆ ಸ್ಪಂದಿಸಿ ಒಪ್ಪಿಗೆಯನ್ನು ರಾಜ್ಯ ಗೃಹ ಇಲಾಖೆ ಸೂಚಿಸಿತ್ತು.
ಇದರ ನಡುವೆ ಚಿನಕುರುಳಿ ಪೊಲೀಸ್ ಠಾಣೆಯನ್ನು ಕ್ಯಾತನಹಳ್ಳಿಗೆ ಶಿಫ್ಟ್ ಮಾಡುವುದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಶಾಸಕರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂಬುದಾಗಿ ಆಕ್ರೋಶವನ್ನು ಹೊರ ಹಾಕಿದರು. ಕ್ಯಾತನಹಳ್ಳಿಗೂ ಪೊಲೀಸ್ ಠಾಣೆ ಮಾಡಲಿ, ಜೊತೆಗೆ ಚಿನಕುರುಳಿಯಲ್ಲಿರುವ ಪೊಲೀಸ್ ಠಾಣೆ ಉಳಿಸಲಿ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ರಾಜಕೀಯ ಉದ್ದೇಶದಿಂದ ಈ ರೀತಿ ಮಾಡಲಾಗಿದೆ ಎಂದು ಆರೋಪಿಸಿದಂತ ಗ್ರಾಮಸ್ಥರು, ಚಿನಕುರುಳಿಯಲ್ಲಿರುವಂತ ಪೊಲೀಸ್ ಠಾಣೆಯಲ್ಲಿ ಕ್ಯಾತನಹಳ್ಳಿಗೆ ಶಿಫ್ಟ್ ಮಾಡದಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಪ್ರತಿಭಟನೆಯಲ್ಲಿ ಮಾಜಿ ಜಿ.ಪಂ.ಸದಸ್ಯ ಅಶೋಕ್, ಮನ್ಮುಲ್ ನಿರ್ದೇಶಕ ಶಿವಕುಮಾರ್, ಸೇರಿದಂತೆ ಇತರೆ ಗ್ರಾಮಸ್ಥರು ಪಾಲ್ಗೊಂಡಿದ್ದರು.
ವರದಿ: ಗಿರೀಶ್ ರಾಜ್, ಮಂಡ್ಯ
Watch Video: ಗುತ್ತಿಗೆ ಸ್ಟಾಫ್ ನರ್ಸ್ ರಿನೀವಲ್ ಗೆ ಲಂಚಕ್ಕೆ ಬೇಡಿಕೆ ಇಟ್ಟ ವೈದ್ಯ: ಆಡಿಯೋ ವೈರಲ್