ಬೆಂಗಳೂರು: ಚಿಂಚನಸೂರು ಗ್ರಾಮದ ಸುತ್ತಮುತ್ತ ಲಘು ಭೂಕಂಪನ ಉಂಟಾಗಿದೆ. ಹೀಗಾಗಿ ಗ್ರಾಮದ ಜನರು ಆತಂಕಕ್ಕೀಡಾಗದಿರಲು ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಬೆಳಗ್ಗೆ 8. 17 ಗಂಟೆಯ ಸುಮಾರಿಗೆ ಸಣ್ಣ ಪ್ರಮಾಣದ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆ ದಾಖಲಾಗಿರುತ್ತದೆ.
ಈ ಘಟನೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದೊಂದಿಗೆ ತಾವು ಸಂಪರ್ಕದಲ್ಲಿದ್ದು ಸ್ಥಳಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ತಹಸೀಲ್ದಾರ, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಭೂಕಂಪನವು ಸಣ್ಣ ಪ್ರಮಾಣದ್ದಾಗಿದ್ದು ಸಾರ್ವಜನಿಕರು ಹಾಗೂ ಚಿಂಚನಸೂರು ಸೇರಿದಂತೆ ಸುತ್ತಮುತ್ತಲಿನ ವ್ಯಾಪ್ತಿಯ ಗ್ರಾಮಸ್ಥರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ವಿನಂತಿ ಮಾಡಿದ್ದಾರೆ.
ಕಲಬುರ್ಗಿಯಲ್ಲಿ 2.3 ತೀರ್ವತೆಯಲ್ಲಿ ಭೂಕಂಪನ: ಬೆಚ್ಚಿ ಬಿದ್ದ ಜನರು | Earthquake in Kalaburagi