ತುಮಕೂರು : ತುಮಕೂರಿನಲ್ಲಿ ಎಡೆಯೂರು ಸಿದ್ದಲಿಂಗೇಶ್ವರ ದೇವಸ್ಥಾನದ ಬಳಿ ನವಜಾತ ಗಂಡು ಶಿಶು ಪತ್ತೆಯಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಎಡೆಯೂರು ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನದ ಬಳಿ ನವಜಾತ ಶಿಶು ಪತ್ತೆಯಾಗಿದೆ.
ಬ್ಯಾಗ್ ನಲ್ಲಿ ಪೋಷಕರು ನವಜಾತ ಗಂಡು ಶಿಶು ಇಟ್ಟು ಪರಾರಿಯಾಗಿದ್ದಾರೆ. ಸಿದ್ದಲಿಂಗೇಶ್ವರ ದೇಗುಲದ ಸಮೀಪ ರಸ್ತೆ ಪಕ್ಕದಲ್ಲಿ ಬ್ಯಾಗ್ ಪತ್ತೆಯಾಗಿದೆ. ಸಾರ್ವಜನಿಕರು ಸ್ಥಳಕ್ಕೆ ಹೋಗಿ ಬ್ಯಾಕ್ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ನವಜಾತ ಗಂಡು ಶಿಶು ಇರುವುದು ಪತ್ತೆಯಾಗಿದ್ದು, ತಕ್ಷಣ ಮಗುವಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.








