ಬೆಂಗಳೂರು : ಮೆಟ್ರೋ ದೊರ ಪರಿಷ್ಕರಣೆ ಸಂಬಂಧ ಇಂದು ಬಿಜೆಪಿಯ ಸಂಸದ ತೇಜಸ್ವಿ ಸೂರ್ಯ ಪ್ರತಿಭಟನೆಗೆ ಸಿದ್ಧತೆ ಮಾಡಿಕೊಂಡಿದ್ದರು ಆದರೆ ಬೆಂಗಳೂರಿನ ಜಯನಗರ ಠಾಣೆ ಪೊಲೀಸರು ತೇಜಸ್ವಿ ಸೂರ್ಯ ಅವರಿಗೆ ಪ್ರತಿಭಟನೆಗೆ ಅನುಮತಿ ನಿರಾಕರಿಸಿ ನೋಟಿಸ್ ನೀಡಿದ್ದಾರೆ.
ಹೌದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಮೆಟ್ರೋ ದರ ಪರಿಷ್ಕರಣೆ ಸಂಬಂಧ ಇಂದು ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಸರ್ಕಾರದ ವಿರುದ್ಧ ಇಂದು ಪ್ರತಿಭಟನೆಗೆ ಮುಂದಾಗಿದ್ದರು. ಆರ್ ವಿ ಮೆಟ್ರೋ ನಿಲ್ದಾಣದ ಬಳಿ ಪ್ರತಿಭಟನೆಗೆ ತಯಾರಿ ಮಾಡಿಕೊಂಡಿದ್ದರು. ಶಾಸಕ ರಾಮಮೂರ್ತಿ ಜೊತೆಗೆ ಪ್ರತಿಭಟನೆಗೆ ಮುಂದಾಗಿದ್ದರು.
ಹೈಕೋರ್ಟ್ ಆದೇಶದಂತೆ ಫ್ರೀಡಂ ಪಾರ್ಕ್ ಹೊರತುಪಡಿಸಿ ಬೆಂಗಳೂರಿನ ಬೇರೆ ಎಲ್ಲೂ ಮುಷ್ಕರ ನಡೆಸುವಂತಿಲ್ಲ ಮೆರವಣಿಗೆ ಮುಷ್ಕರಕ್ಕೆ ಅನುಮತಿ ನಿರಾಕರಿಸಿ ಬೆಂಗಳೂರಿನ ಜಯನಗರ ಠಾಣೆ ಪೊಲೀಸರು ತೇಜಸ್ವಿ ಸೂರ್ಯ ಅವರಿಗೆ ನೋಟಿಸ್ ನೀಡಿದ್ದಾರೆ.








