ಮೈಸೂರು: ಮುಖ ತೊಳೆಯುತ್ತಿದ್ದಂತ ಸಂದರ್ಭದಲ್ಲಿಯೇ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವಂತ ಘಟನೆ ಮೈಸೂರಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ಕೂಡ್ಲೂರು ಗ್ರಾಮದಲ್ಲಿ ಮುಖ ತೊಳೆಯುತ್ತಿದ್ದಾಗಲೇ ಪುರುಷೋತ್ತಮ್ (35) ಎಂಬಾತ ಕುಸಿದು ಬಿದ್ದಿದ್ದಾನೆ. ಎದೆ ನೋವು ಕಾಣಿಸಿಕೊಂಡಿದ್ದಂತ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಸಾವನ್ನಪ್ಪಿದ್ದಾನೆ.
ಪುರುಷೋತ್ತಮ್ ಪರೀಕ್ಷಿಸಿದಂತ ವೈದ್ಯರು ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ದಿನೇ ದಿನೇ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾದಂತೆ ಆಗಿದೆ.
ರಾಜ್ಯದಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ: ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಿದ ಟೆಕ್ನಿಕಲ್ ಕಮಿಟಿ
ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತದಿಂದ ದಿನೇ ದಿನೇ ಸಾವು ಪ್ರಕರಣಗಳ ಹೆಚ್ಚಳದ ಬಗ್ಗೆ ಆರೋಗ್ಯ ಇಲಾಖೆಗೆ ಟೆಕ್ನಿಕಲ್ ಕಮಿಟಿಯಿಂದ ವರದಿಯನ್ನು ಸಲ್ಲಿಸಲಾಗಿದೆ.
ರಾಜ್ಯದ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ಈ ಟೆಕ್ನಿಕಲ್ ಕಮಿಟಿಯ ವರದಿಯ ಅಂಶಗಳನ್ನು ಚರ್ಚಿಸಲಾಗಿದೆ. ಹೃದಯಾಘಾತ ಅಧ್ಯಯನ ಕುರಿತ ಸಂಪೂರ್ಣ ಮಾಹಿತಿಯನ್ನು ಸರ್ಕಾರಕ್ಕೆ ನೀಡಲಾಗಿದೆ. ಅಲ್ಲದೇ ಸರ್ಕಾರಕ್ಕೆ ನೀಡಬೇಕಾದ ಸಲಹೆ ಬಗ್ಗೆಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ರವೀಂದ್ರ ನಾಥ್ ತಂಡದಿಂದ ತಾಂತ್ರಿಕ ಸಲಹಾ ಸಮಿತಿಯು ವರದಿಯನ್ನು ನೀಡಲಾಗಿದ್ದು, ವರದಿಯಲ್ಲಿ ಪ್ರಮುಖ ಅಂಶಗಳನ್ನು ಉಲ್ಲೇಖಿಸಲಾಗಿದೆ.
ರಾಜ್ಯ ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ಸಲ್ಲಿಸಿದಂತ ವರದಿಯಲ್ಲಿ ಒಟ್ಟು 251 ಮಂದಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ. 251 ರೋಗಿಗಳಲ್ಲಿ 87 ಮಂದಿಗೆ ಶುಗರ್ ಕಾಯಿಲೆ ಇರೋದಾಗಿ ತಿಳಿದು ಬಂದಿದೆ. 102 ರೋಗಿಗಳಿಗೆ ಬಿಪಿ, 35 ಮಂದಿಗೆ ಕೊಲೆಸ್ಟ್ರಾಲ್ ಇದೆ. 40 ಮಂದಿಗೆ ಹೃದಯ ಸಂಬಂಧಿ ಕಾಯಿಲೆ ಇರೋದನ್ನು ಪತ್ತೆ ಹಚ್ಚಿದೆ.
251 ಮಂದಿಯಲ್ಲಿ 111 ಜನರು ಧೂಮಪಾನಿಗಳಾಗಿದ್ದಾರೆ. 19 ಮಂದಿಗೆ ಕೋವಿಡ್ ಹಿಸ್ಟರಿ ಇದೆ. 77 ಮಂದಿಗೆ ಯಾವುದೇ ರೋಗಗಳು ಇರಲಿಲ್ಲ. 30 ವರ್ಷಕ್ಕಿಂತ ಕಡಿಮೆ ವಯಸ್ಸಿನ 12 ಹೃದ್ರೋಗಿಗಳ ಬಗ್ಗೆ ಅಧ್ಯಯನ ಕೂಡ ಮಾಡಲಾಗಿದೆ.
31 ರಿಂದ 40 ವಯಸ್ಸಿನ 66 ಹೃದ್ರೋಗಿಗಳ ಬಗ್ಗೆ ಅಧ್ಯಯನ ಕೈಗೊಳ್ಳಲಾಗಿದೆ. 41ರಿಂದ 45 ವಯಸ್ಸಿನ 172 ಹೃದ್ರೋಗಿಗಳ ಬಗ್ಗೆ ಕೂಡ ಅಧ್ಯಯನವನ್ನು ತಾಂತ್ರಿಕ ಸಲಹಾ ಸಮಿತಿ ನಡೆಸಿದೆ.
BREAKING: ರಾಜ್ಯದಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ: ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಿದ ಟೆಕ್ನಿಕಲ್ ಕಮಿಟಿ