ಮಂಡ್ಯ: ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಎಡವಟ್ಟಿಗೆ ವ್ಯಕ್ತಿ ಬಲಿಯಾಗಿದ್ದಾರೆ. ರಸ್ತೆಯಲ್ಲಿ ಮದ್ಯೆ ಕಿರು ಸೇತುವೆ ಕಾಮಗಾರಿ ಸ್ಥಳಕ್ಕೆ ಸ್ಕೂಟರ್ ಸಮೇತ ಬಿದ್ದು ವ್ಯಕ್ತಿ ಸಾವನ್ನಪ್ಪಿದಂತ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬೆಟ್ಟ ದಾಸನದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಿಯಮಾನುಸಾರ ಕಾಮಗಾರಿ ಸ್ಥಳದಲ್ಲಿ ಬ್ಯಾರಿಕೇಡ್ ಮತ್ತು ಕಾಮಗಾರಿ ಮಾಹಿತಿ ಫಲಕ ಅಳವಡಿಸದೆ ಕಾಮಗಾರಿ ಇದಾಗಿದೆ. ಕಾಮಗಾರಿ ನಡೆಯುತ್ತಿರುವ ಮಾಹಿತಿ ಇಲ್ಲದೆ ಈ ಮಾರ್ಗದಲ್ಲಿ ಬಂದ ಸ್ಕೂಟರ್ ಸವಾರ ಸ್ಕೂಟರ್ ಸಮೇತ ಕೆಳಕ್ಕೆ ಬಿದ್ದು ಸಾವನ್ನುಪ್ಪಿದ್ದಾರೆ.
ಮೃತರನ್ನು ಕೆಸ್ತೂರು ಗ್ರಾಮದ ರಾಮು(50) ಎಂದು ಗುರುತಿಸಲಾಗಿದೆ. ರಾಮು ಅವರು ಸ್ಕೂಟರ್ ಸಮೇತ ಕೆಳಗೆ ಬಿದ್ದಂತ ವೇಳೆಯಲ್ಲಿ ಸ್ಥಳದಲ್ಲಿ ಸರಳು ಚುಚ್ಚಿ ಸಾವನ್ನಪ್ಪಿದ್ದಾರೆ.
ಅವೈಜ್ಞಾನಿಕ ಕಾಮಗಾರಿ ನಡೆಸುತ್ತಾ ವ್ಯಕ್ತಿ ಸಾವಿಗೆ ಕಾರಣರಾದ ಇಲಾಖೆ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಸಂಬಂಧ ಕೆಸ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಗಿರೀಶ್ ರಾಜ್, ಮಂಡ್ಯ
‘ಲಾ ನಿನಾ’ದಿಂದಾಗಿ ಭಾರತದಲ್ಲಿ ‘ಶೀತ ಚಳಿಗಾಲ’ ಹೆಚ್ಚಾಗುವ ಸಾಧ್ಯತೆ ಇದೆ: ಹವಾಮಾನ ತಜ್ಞರು
ಮಾನವೀಯತೆ ಮೆರೆದ ಜಡ್ಜ್: ವೃದ್ಧನ ಬಳಿ ತೆರಳಿ ತೀರ್ಪು, ಸ್ಥಳದಲ್ಲೇ ಪರಿಹಾರಕ್ಕೆ ಆದೇಶ