ಕೋಲಾರ: ಜಿಲ್ಲೆಯಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಘಟನೆ ಕೋಲಾರದ ಬಾವನಹಳ್ಳಿಯಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಬಾವನಹಳ್ಳಿಯಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೇ ಕಾರಿನಲ್ಲಿದ್ದ ಮತ್ತೊಬ್ಬರಿಗೆ ಗಾಯವಾಗಿದೆ. ಅವರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮೃತ ಗರ್ಭಿಣಿ ಮಹಿಳೆಯನ್ನು ಬಾವನಹಳ್ಳಿ ಬಳಿಯ ಕೊರಚನೂರು ಗ್ರಾಮದ ಅರ್ಚನಾ ಎಂಬುದಾಗಿ ತಿಳಿದು ಬಂದಿದೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ 393 ಶಾಶ್ವತ ಆಶಾಕಿರಣ ದೃಷ್ಟಿ ಕೇಂದ್ರಗಳು ಕಣ್ಣಿನ ಆರೋಗ್ಯ ಸೇವೆಗೆ ಸಜ್ಜು: ಸಚಿವ ದಿನೇಶ್ ಗುಂಡೂರಾವ್