ಮಂಡ್ಯ : ಕಳೆದ 20 ವರ್ಷಗಳಿಂದ ತಲೆದೊರಿರುವ ಆತಗೂರು ಹೋಬಳಿಯ ರೀ ಸರ್ವೆ ಸಮಸ್ಯೆಗೆ ಇನ್ನು ಕೆಲ ದಿನಗಳಲ್ಲೇ ಮುಕ್ತಿ ನೀಡಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಶುಕ್ರವಾರ ಭರವಸೆ ನೀಡಿದರು.
ಮದ್ದೂರು ತಾಲೂಕಿನ ಈಡಿಗರದೊಡ್ಡಿ, ಚಾಕನಕೆರೆ ಹಾಗೂ ನವಿಲೆ ಗ್ರಾಮಗಳಲ್ಲಿ ಸುಮಾರು 2 ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಸೇತುವೆ ಕಾಮಗಾರಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಆತಗೂರು ಹೋಬಳಿಯನ್ನು ರೀ ಸರ್ವೆ ಮಾಡಲು ಕ್ರಮ ಕೈಗೊಳ್ಳಲಾಗಿತ್ತು. ಆದರೆ, ಬದಲಾದ ರಾಜಕೀಯ ಸನ್ನಿವೇಶದಿಂದ ರೀ ಸರ್ವೆ ಪ್ರಕ್ರಿಯೆ ಅರ್ಧಕ್ಕೆ ನಿಂತು ಹೋಯಿತು. ಇದರಿಂದ ಈ ಭಾಗದ ರೈತರಿಗೆ ಸಾಕಷ್ಟು ಸಮಸ್ಯೆ ಉಂಟಾಗಿತ್ತು. ಕಳೆದ 15 ವರ್ಷಗಳಿಂದ ಕ್ಷೇತ್ರದ ಜನಪ್ರತಿನಿಧಿಗಳು ಸಹ ರೈತರ ಸಮಸ್ಯೆಯನ್ನು ಬಗೆಹರಿಸಲು ವಿಫಲರಾಗಿದ್ದಾರೆ.
ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಪ್ರತಿ ಗ್ರಾಮಗಳಲ್ಲಿ ಜನ ಸಂಪರ್ಕ ಸಭೆ ನಡೆಸಿದ ಸಂದರ್ಭದಲ್ಲಿ ಎಲ್ಲಾ ಗ್ರಾಮಗಳಲ್ಲೂ ರೀ ಸರ್ವೆ ಸಮಸ್ಯೆಯ ಬಗ್ಗೆ ಹೆಚ್ಚು ದೂರುಗಳು ಕೇಳಿ ಬಂದಿದ್ದವು. ಹೀಗಾಗಿ ಕಳೆದ ಎರಡು ವರ್ಷಗಳಿಂದ ನಡೆದ ಸದನದ ಕಲಾಪದ ವೇಳೆ ಈ ಸಂಬಂಧ ಸಚಿವರ ಗಮನ ಸೆಳೆಯಲಾಗಿತ್ತು. ಹಾಗೂ ಗುರುವಾರ ಕೂಡ ಈ ಬಗ್ಗೆ ಚರ್ಚೆ ನಡೆಸಿದ್ದು, ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಇನ್ನು ಕೆಲ ದಿನಗಳಲ್ಲೇ ಈ ಸಮಸ್ಯೆಗೆ ಮುಕ್ತಿ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದರು.
ಅಷ್ಟೇ ಅಲ್ಲದೇ ನಗರದ ತಾಲೂಕು ಕ್ರೀಡಾoಗಣದ ಮೇಲ್ದರ್ಜೆಗೆ ಏರಿಸುವ ಬಗ್ಗೆಯೂ ಸದನದಲ್ಲಿ ಮುಖ್ಯಮಂತ್ರಿಗಳು ಹಾಗೂ ಸಚಿವರ ಗಮನಕ್ಕೆ ತಂದಿದ್ದೇನೆ, ಈ ಬಗ್ಗೆ ಸಂಬಂಧಪಟ್ಟ ಸಚಿವರುಗಳಿಂದ ಸಕಾರಾತ್ಮಕ ಉತ್ತರ ಸಿಕ್ಕಿದೆ ಶೀಘ್ರವಾಗಿ ನಗರದಲ್ಲಿ ಹೈ ಟೆಕ್ ಕ್ರೀಡಾಂಗಣಕ್ಕೆ ಬಜೆಟ್ ನಲ್ಲಿ ಅನುದಾನ ಬಿಡುಗಡೆಯಾಗುವ ನಿರೀಕ್ಷೆಗಳಿವೆ ಎಂದು ತಿಳಿಸಿದರು.
ಇನ್ನು ಬೇಸಿಗೆಯು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕೂಡ ಸೂಕ್ತ ಮುಂಜಾಗ್ರತಾ ಕ್ತಮಗಳನ್ನು ಅನುಸರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಇದೇ ವೇಳೆ ಮನ್ ಮುಲ್ ನಿರ್ದೇಶಕ ಹರೀಶ್ ಬಾಬು,
ಮುಖಂಡರಾದ ಕೆಸ್ತೂರು ದಾಸೇಗೌಡ, ನಾಗೇಗೌಡ, ಶಂಕರಲಿಂಗೇಗೌಡ, ದುಂಡನಹಳ್ಳಿ ಯೋಗೇಶ್, ನವೀನ್ ಕುಮಾರ್, ಕೃಷ್ಣ, ಪ್ರಸಾದ್, ಕಾವೇರಿ ನೀರಾವರಿ ನಿಗಮದ ಎಇಇ ನಾಗರಾಜ್, ಕೆಆರ್ಐಡಿಎಲ್ ಇಂಜಿನಿಯರ್ ರಾಕೇಶ್, ಪಿಡಿಓ ಮಧುಸೂದನ್ ಸೇರಿದಂತೆ ಹಲವರು ಹಾಜರಿದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
ಡಯಾಲಿಸಿಸ್ ರೋಗಿಗಳಿಗೆ ಬಿಗ್ ಶಾಕ್: ರಾಜ್ಯ ಸರ್ಕಾರದಿಂದ ಇನ್ ಹೌಸ್ ಮಾದರಿಯ ಕೇಂದ್ರಗಳ ಡಯಾಲಿಸಿಸ್ ಸೈಕಲ್ ದರ ಹೆಚ್ಚಳ
ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಈಗ ಮೆಟ್ರೋ ರೈಲಿನಲ್ಲಿ ಈ ಎಲ್ಲವೂ ನಿಷೇಧ, ತಪ್ಪಿದ್ರೆ ಕೇಸ್, ದಂಡ ಫಿಕ್ಸ್








