ಮಂಡ್ಯ : ಹುಚ್ಚು ನಾಯಿ ( ರೇಬಿಸ್ ರೋಗ ) ಕಡಿತದಿಂದ ಮಕ್ಕಳು, ವೃದ್ಧರು ಸೇರಿ 12 ಮಂದಿ ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ಕಬ್ಬಾರೆ ಗ್ರಾಮದಲ್ಲಿ ಬುಧವಾರ ಸಂಜೆ ಜರುಗಿದೆ.
ಬುಧವಾರ ಸಂಜೆಯಿಂದ ಗುರುವಾರ ಸಂಜೆವರೆಗೆ ಗ್ರಾಮದಲ್ಲಿ ಕಾಣಿಸಿಕೊಂಡ ಹುಚ್ಚು ನಾಯಿಯೊಂದು ರಸ್ತೆ ಬದಿಯಲ್ಲಿ ಹೋಗುತ್ತಿದ್ದ ಜನರ ಮೇಲೆ ಮನ ಬಂದಂತೆ ಕಚ್ಚುತ್ತಾ ಸಾಗಿದೆ. ಗ್ರಾಮದಲ್ಲೆಲ್ಲ ತಿರುಗಾಟ ನಡೆಸಿ 12 ಮಂದಿಯನ್ನು ಗಾಯಗೊಳಿಸಿದೆ. ದ್ವಿಚಕ್ರ ವಾಹನ ಸವಾರರನ್ನು ಅಟ್ಟಾಡಿಸಿಕೊಂಡು ಹೋಗಿದೆ. ಇದರಿಂದ ವಾಹನ ಸವಾರರು ಕೂಡ ಗಾಬರಿಗೊಂಡು ಅಡ್ಡಾದಿಡ್ಡಿಯಾಗಿ ಚಲಿಸಿ ಕೆಳಗೆ ಬಿದ್ದು ಕೈ ಕಾಲುಗಳಿಗೆ ಗಾಯ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಗಾಯಗೊಂಡವರನ್ನು ಕೆ.ಹೊನ್ನಲಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ದೇಹದ ಕಾಲು ಸೇರಿದಂತೆ ವಿವಿಧ ಭಾಗಗಳಿಗೆ ನಾಯಿ ಕಚ್ಚಿದ್ದು, ಯಾರಿಗೂ ಪ್ರಾಣಾಪಾಯವಿಲ್ಲ ಎಂದು ಡಾ.ಸುನೀಲ್ ಕುಮಾರ್ ತಿಳಿಸಿದ್ದಾರೆ.
ಹುಚ್ಚು ನಾಯಿ ಕಡಿತದಿಂದ ಆಕ್ರೋಶಗೊಂಡ ಸ್ಥಳೀಯರು ನಾಯಿಯನ್ನು ಕೊಲ್ಲಲು ಪ್ರಯತ್ನಿಸಿದರು. ಅದು ತಪ್ಪಿಸಿಕೊಂಡಿದೆ ಎಂದು ಸ್ಥಳೀಯರು ತಿಳಿಸಿದರು.
ಕಬ್ಬಾರೆ ಗ್ರಾಮ ಪಂಚಾಯಿತಿ ಸದಸ್ಯ ರಾಘವೇಂದ್ರ ಮಾತನಾಡಿ, ಗ್ರಾಮದಲ್ಲಿ ಬೀದಿ ನಾಯಿಗಳು ಮತ್ತು ಹುಚ್ಚು ನಾಯಿ ಹಾವಳಿ ಹೆಚ್ಚಿದೆ. ಗ್ರಾಮಸ್ಥರು ಸೇರಿದಂತೆ ಹಲವು ಜನರ ಮೇಲೆ ಹುಚ್ಚು ನಾಯಿ ದಾಳಿ ನಡೆಸಿದೆ. ಸಾರ್ವಜನಿಕರು ಹಾಗೂ ಶಾಲಾ, ಕಾಲೇಜು ಮಕ್ಕಳು ಮತ್ತು ವಾಹನ ಸವಾರರಿಗೆ ರಸ್ತೆಯಲ್ಲಿ ಓಡಾಡಲು ಭಯ ಪಡಬೇಕಾದ ವಾತಾವರಣ ಇದೆ. ತಕ್ಷಣವೇ ಸಂಬಂಧ ಪಟ್ಟ ಇಲಾಖೆಯವರು ನಾಯಿ ಸೆರೆ ಹಿಡಿಯಬೇಕೆಂದು ಎಂದು ಆಗ್ರಹಿಸಿದರು.
ವರದಿ : ಗಿರೀಶ್ ರಾಜ್, ಮಂಡ್ಯ
ಧರ್ಮಸ್ಥಳ ಕೇಸ್: ಅನಾಮಿಕ ಕೊಟ್ಟ ‘ತಲೆ ಬುರುಡೆ’ ಬಗ್ಗೆ ತನಿಖೆ ಏಕಿಲ್ಲ- ಹೈಕೋರ್ಟ್ ವಕೀಲರ ಪ್ರಶ್ನೆ
BIG NEWS: ‘ಧರ್ಮಸ್ಥಳ ಕೇಸ್’ಗೆ ಸ್ಪೋಟಕ ಟ್ವಿಸ್ಟ್: ಡೆಬಿಟ್ ಕಾರ್ಡ್, ಪಾನ್ ಕಾರ್ಡ್ ರಹಸ್ಯ ಬಯಲು ಮಾಡಿದ ‘SIT’
BREAKING: ಸಾಗರದ ತಾಯಿ-ಮಕ್ಕಳ ಆಸ್ಪತ್ರೆಯ ‘ಜನರೇಟರ್ ಕದ್ದೊಯ್ದ’ವರ ವಿರುದ್ಧ ‘FIR’ ದಾಖಲು