ಬೆಂಗಳೂರು : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದರ ಹಿನ್ನೆಲೆಯಲ್ಲಿ ನಿನ್ನೆ ಲೋಕಾಯುಕ್ತ ಅಧಿಕಾರಿಗಳು ಓರ್ವ ಐಎಎಸ್ ಅಧಿಕಾರಿ ಸೇರಿದಂತೆ 8 ಸರಕಾರಿ ಅಧಿಕಾರಿಗಳ ನಿವಾಸದ ಮೇಲೆ ದಾಳಿ ಮಾಡಿದ್ದು ದಾಳಿಯ ವೇಳೆ ಚಿನ್ನ ನಗದು ಸೇರಿದಂತೆ ಒಟ್ಟು 37.41 ಕೋಟಿಯ ಆಸ್ತಿ ಪತ್ತೆಯಾಗಿದೆ.
ಹೌದು ನಿನ್ನೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲದಲ್ಲಿ 41 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಕೋಟ್ಯಂತರ ರೂಪಾಯಿ ಪ್ರಮಾಣದ ಚರ-ಸ್ಥಿರಾಸ್ತಿ ಪತ್ತೆ ಮಾಡಿದ್ದಾರೆ.ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದರು. ಐಐಎಸ್ ಮಹಿಳಾ ಅಧಿಕಾರಿ ಒಳಗೊಂಡಂತೆ ಎಂಟು ಮಂದಿ ಅಧಿಕಾರಿಗಳ ಮನೆಗಳ ದಾಳಿ ನಡೆಸಿದ್ಧಾರೆ.
ದಾಳಿ ವೇಳೆ ಮನೆಯಲ್ಲಿ ಅಪಾರ ಪ್ರಮಾಣದ ಆಸ್ತಿ, ಜಮೀನಿಗೆ ಸೇರಿದ ಪತ್ರಗಳು, ಲಕ್ಷಾಂತರ ರೂಪಾಯಿ ನಗದು, ಕೋಟಿ ಬೆಳೆಬಾಳುವ ಚಿನ್ನಾಭರಣ ಸೇರಿದಂತೆ ಒಟ್ಟು 37.41 ಕೋಟಿ ರೂ ಮೌಲ್ಯದ ಆಸ್ತಿಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಅಧಿಕಾರಿಗಳು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.ಬೆಂಗಳೂರು ನಗರ, ಮೈಸೂರು, ತುಮಕೂರು, ಕಲಬುರಗಿ, ಕೊಪ್ಪಳ ಹಾಗೂ ಕೊಡಗು ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳ ನಿವಾಸಗಳ ಮನೆ ದಾಳಿ ನಡೆಸಿ ಅವರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.