ಬೆಂಗಳೂರು: ಜಿಲ್ಲೆಯ ಕಲ್ಲುಬಾಳ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಪಂಚಾಯ್ತಿ ಸದಸ್ಯರ ನಡುವೆಯೇ ಮಾರಾಮಾರಿ ನಡೆದಿರೋದಾಗಿ ತಿಳಿದು ಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಗಣಿಯ ಕಲ್ಲುಬಾಳ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಇಂದು ಸದಸ್ಯ ಮಂಜುನಾಥ್ ಹಾಗೂ ನಾಗರಾಜು ಎಂಬುವರ ನಡುವೆ ಮಾರಾಮಾರಿ ಘಟನೆ ನಡೆದಿದೆ.
ಕೋನಸಂದ್ರ ಗ್ರಾಮ ಪಂಚಾಯ್ತಿ ಸದಸ್ಯ ಮಂಜುನಾಥ್ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದ್ದು, ಮಹಾಂತಲಿಂಗಾಪುರ ಗ್ರಾಮ ಪಂಚಾಯ್ತಿ ಸದಸ್ಯ ನಾಗರಾಜು ಎಂಬುವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬುದಾಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಮಂಜುನಾಥ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ.
ಪಿಡಿಓ, ಕಾರ್ಯದರ್ಶಿ ಹಾಗೂ ಇತರೆ ಕಲ್ಲುಬಾಳ ಗ್ರಾಮ ಪಂಚಾಯ್ತಿ ಸದಸ್ಯರ ಸಮ್ಮುಖದಲ್ಲೇ ಸದಸ್ಯ ಮಂಜುನಾಥ್ ಹಾಗೂ ನಾಗರಾಜು ನಡುವೆ ಮಾರಾಮಾರಿ ನಡೆದಿರೋದಾಗಿ ಹೇಳಲಾಗುತ್ತಿದೆ.
ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಜಿಗಣಿ ಠಾಣೆಯ ಪೊಲೀಸರು, ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
BREAKING: ವಿಧಾನಪರಿಷತ್ತಿನಲ್ಲಿ ‘APMC ತಿದ್ದುಪಡಿ ವಿಧೇಯಕ’ ಅಂಗೀಕಾರ
ಬೆಂಗಳೂರು : ಕಾರು ವಿಚಾರವಾಗಿ ಸಹೋದರರ ನಡುವೆ ಗಲಾಟೆ : ಪೆಟ್ರೋಲ್ ಹಾಕಿ ತಮ್ಮನ ಕೊಲೆಗೈದ ಅಣ್ಣ