ಮೈಸೂರು: ಜಿಲ್ಲೆಯಲ್ಲಿ ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಹಾಡಹಗಲೇ ಬಂಗಾರದ ಅಂಗಡಿಗೆ ನುಗ್ಗಿ, ದರೋಡೆ ಮಾಡಿರುವಂತ ಘಟನೆ ಹುಣಸೂರಿನಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಹಾಡಹಗಲೇ ದರೋಡೆ ಮಾಡಲಾಗಿದೆ. ಸ್ಕೈ ಆಭರಣ ಮಳಿಗೆಗೆ ನುಗ್ಗಿ ಹಣ ಮತ್ತು ಚಿನ್ನಾಭರಣ ದರೋಡೆ ಮಾಡಲಾಗಿದೆ.
ಮೈಸೂರಿನ ಹುಣಸೂರು ಬಸ್ ನಿಲ್ದಾಣದ ಹಿಂಭಾಗದಲ್ಲೇ ಸ್ಕೈ ಆಭರಣ ಮಳಿಗೆ ಇದ್ದು, ಐದಕ್ಕು ಹೆಚ್ಚು ದುಷ್ಕರ್ಮಿಗಳ ಗುಂಪಿನಿಂದ ಈ ಕೃತ್ಯ ಎಸಗಲಾಗಿದೆ.
ಆಭರಣ ಮಳಿಗೆಯ ಸಿಬ್ಬಂದಿಗಳಿಗೆ ಗನ್ ತೋರಿಸಿ ಬೆದರಿಸಿ ಹಾಡಹಗಲೇ ಹಣ, ಚಿನ್ನಾಭರಣವನ್ನು ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹುಣಸೂರು ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸುತ್ತಿದ್ದಾರೆ.
ರಾಜ್ಯದ ಪೊಲೀಸರು ಡ್ರಗ್ ಟ್ರಾಫಿಕಿಂಗ್‌ನಲ್ಲಿ ಶಾಮೀಲಾಗಿದ್ದಾರೆ ಎಂಬ ಅನುಮಾನ ಮೂಡುತ್ತಿದೆ: ಸಂಸದ ಬೊಮ್ಮಾಯಿ








