ಕೊಡಗು: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ನಡು ರಸ್ತೆಯಲ್ಲೇ ಗುಂಡು ಹಾರಿಸಿಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ಕೊಡಗಿನಲ್ಲಿ ನಡೆದಿದೆ.
ಕೊಡಗು ಜಿಲ್ಲೆಯ ಮಡಿಕೇರಿಯ ಹಿಮವನ ಲೇಔಟ್ ನಲ್ಲಿ ರಸ್ತೆಯಲ್ಲೇ ವ್ಯಕ್ತಿಯೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಮ್ಮ ಮನೆ ಎದುರಿನ ರಸ್ತೆಯಲ್ಲೇ ದೇವಿಪ್ರಸಾದ್(40) ಎಂಬಾತ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅನಾರೋಗ್ಯ ಸಮಸ್ಯೆಯಿಂದ ಮೃತ ದೇವಿಪ್ರಸಾದ್ ಬಳಲುತಿದ್ದರು ಎಂಬುದಾಗಿ ಹೇಳಲಾಗುತ್ತಿದೆ. ಒಂಟಿ ನಳಿಕೆ ಕೋವಿಯಿಂದ ಗುಂಡು ಹಾರಿಸಿಕೊಂಡು ದೇವಿಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗ ದೇವಿಪ್ರಸಾದ್ ನನ್ನು ಕಳೆದುಕೊಂಡು ತಾಯಿ ಗೋಳಾಡುತ್ತಿದ್ದಾರೆ.
ಸಾಗರದ ‘ಜಾಮೀಯಾ ಮಸೀದಿ’ಯಲ್ಲಿ ಭ್ರಷ್ಟಾಚಾರ: ತನಿಖೆಗೆ ‘ಮುಸ್ಲಿಂ ಸಮುದಾಯ’ದಿಂದ ಎಸಿಗೆ ಮನವಿ
SSLC, PUC ಪಾಸಾಗಲು ಎಷ್ಟು ಅಂಕ ಪಡೆಯಬೇಕು? ಇಲ್ಲಿದೆ ಮಂಡಳಿಯ ಅಧಿಕೃತ ಮಾಹಿತಿ








