ಬಾಗಲಕೋಟೆ: ಜಿಲ್ಲೆಯಲ್ಲಿ ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ಆಸ್ತಿ ವಿವಾದಕ್ಕೆ ತಾಯಿ ಮತ್ತು ಮಗನನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲ್ಲೂಕಿನ ನಂದವಾಡಗಿ ಗ್ರಾಮದಲ್ಲಿ ಆಸ್ತಿ ವಿವಾದಕ್ಕೆ ವ್ಯಕ್ತಿಯೊಬ್ಬ ತಾಯಿ, ಮಗನನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.
ತಾಯಿ ಸಂಗಮ್ಮ ಗೋನಾಳ(45), ಮಗ ಸೋಮಪ್ಪ(26) ಎಂಬುವರನ್ನು ಕೊಡಲಿಯಿಂದ ಕೊಚ್ಚಿ ಸಣ್ಣ ಸೋಮಪ್ಪ ಗೋನಾಳ ಎಂಬಾತ ಹತ್ಯೆ ಮಾಡಿದ್ದಾನೆ.
ಈ ವಿಷಯ ತಿಳಿದು ಸ್ಥಳಕ್ಕೆ ಇಳಕಲ್ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.