ಬೆಂಗಳೂರು :ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆ ಗಳ ಮೂಲಕ ನಡೆಯುವ ಸಾಮೂಹಿಕ ವಿವಾಹ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂ. ಮತ್ತು ಕಾರ್ಯಕ್ರಮ ಆಯೋಜಿಸುವ ಸಂಸ್ಥೆಗೆ ಪ್ರತಿ ಜೋಡಿಗೆ 5 ಸಾವಿರ ರೂ. ನೀಡುವ ಕಾರ್ಯಕ್ರಮ ಕ್ಕೆ ಸರ್ಕಾರದ ಮಂಜೂರಾತಿ ದೊರೆತಿದೆ.
ರಾಜ್ಯ ಬಜೆಟ್ ನಲ್ಲಿ ಈ ಕುರಿತು ಘೋಷಿಸಲಾಗಿತ್ತು. ಇದೀಗ ಸರ್ಕಾರಿ ಆದೇಶ ಹೊರಬಿದ್ದಿದೆ. ಈ ಯೋಜನೆಯಡಿಯಲ್ಲಿ 5 ಸಾವಿರ ಜೋಡಿ ಮಿತಿ ವರೆಗೆ ವರೆಗೆ ಸಾಮೂಹಿಕ ವಿವಾಹ ಕಾರ್ಯಕ್ರಮ ಮಾಡಬಹುದಾಗಿದೆ.
ಇದೇ ಸಂದರ್ಭದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 250 ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ ಹಂತ ಹಂತವಾಗಿ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ಪೂರ್ವ ಪ್ರಾಥಮಿಕ ಹಂತದಿಂದ ಪಿಯು ವರೆಗೆ ತರಗತಿ ಪ್ರಾರಂಭಿಸಲುಘೋಷಿಸಲಾಗಿತ್ತು. ಪ್ರಸಕ್ತ ವರ್ಷ 100 ಆಜಾದ್ ಶಾಲೆ ಗಳನ್ನು ಕರ್ನಾಟಕ ಪಬ್ಲಿಕ್ ಶಾಲೆ ಗಳನ್ನಾಗಿ ಮೇಲ್ದರ್ಜೆ ಗೇರಿಸಲು ಆದೇಶ ಹೊರಡಿಸಲಾಗಿದೆ.
ರಾಹುಲ್ ಗಾಂಧಿ ರಾಜೀನಾಮೆಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಒತ್ತಾಯ
RRB NTPC UG-2025ರ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ | RRB NTPC Admit Card 2025