ಮಂಡ್ಯ: ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸೋ ಕೃತ್ಯವೊಂದನ್ನು ಎಸಗಲಾಗಿದೆ. ಆಸ್ತಿಗಾಗಿ ನಾಲ್ಕು ದಿನದಲ್ಲಿ ಹಸೆಮಣೆ ಏರಬೇಕಿದ್ದಂತ ತಮ್ಮನನ್ನೇ ಅಣ್ಣನೊಬ್ಬ 28 ಬಾರಿ ಇರಿದು ಕೊಂದಿರುವಂತ ಘಟನೆ ಮಂಡ್ಯದ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ.
ಮಂಡ್ಯ ತಾಲ್ಲೂಕಿನ ಮಾಯಪ್ಪನಹಳ್ಳಿಯಲ್ಲಿ ಆಸ್ತಿಗಾಗಿ ಅಣ್ಣ, ಅಣ್ಣನ ಮಕ್ಕಳು ಸೇರಿಕೊಂಡು ತಮ್ಮ ಯೋಗೇಶ್(35) ಎಂಬುವರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.
ಇಂದು ಬೆಳಗ್ಗೆ ತಮ್ಮ ಯೋಗೇಶ್ ನನ್ನು ಅಣ್ಣ ಲಿಂಗರಾಜ, ಮಕ್ಕಳಾದಂತ ಭರತ್, ದರ್ಶನ್ ಸೇರಿ ಮನೆಯ ಕೊಟ್ಟಿಗೆಯಲ್ಲೇ ಹರಿತವಾದ ಆಯುಧಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.
ಬುಧವಾರ ಮೃತ ಯೋಗೇಶ್ ಮದುವೆ ಫಿಕ್ಸ್ ಆಗಿತ್ತು. ಇಂದು ಅವರನ್ನು ಕೊಲೆ ಮಾಡಲಾಗಿದೆ. ಕೊಲೆಯ ಬಳಿಕ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಆಸ್ತಿಗಾಗಿ ಸಹೋದರರ ನಡುವೆ ಆಗಿದ್ದಾಂಗೆ ನಡೆಯುತ್ತಿದ್ದಂತ ಜಗಳ, ಈಗ ಕೊಲೆಯಲ್ಲಿ ಅಂತ್ಯಗೊಂಡಿದೆ.
ವಿಷಯ ತಿಳಿದು ಸ್ಥಳಕ್ಕೆ ಕೆರಗೋಡು ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ. ಕೊಲೆ ಮಾಡಿ ಪರಾರಿಯಾಗಿರುವಂತ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಸಿಎಂ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಚಾರ: ಡಿಸಿಎಂ ಡಿ.ಕೆ. ಶಿವಕುಮಾರ್








