ಬೆಂಗಳೂರು: ಹೊನ್ನಾಳಿ ಚಂದ್ರಶೇಖರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ತನಿಖೆ ಚುರುಕುಗೊಂಡಿದೆ. ಚಂದ್ರಶೇಖರ್ ಸಾವಿನ ಬಗ್ಗೆ ವಿಶೇಷ ತನಿಖೆ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
BIGG NEWS : ‘ ಸತೀಶ್ ಜಾರಕಿಹೊಳಿ ಅರೆ ಬರೆ ಓದಿದ ವ್ಯಕ್ತಿ ‘ : ಸಿಎಂ ಬೊಮ್ಮಾಯಿ ವಾಗ್ದಾಳಿ
ನಗರದಲ್ಲಿ ಮಾತನಾಡಿದ ಅವರು, ನಾನು ಈ ತನಿಖೆಯನ್ನು ಗಂಭೀರವಾಗಿ ಗಮನಿಸುತ್ತಿದ್ದೇನೆ. ಇನ್ನೇನು ಶೀಫ್ರದಲ್ಲೇ ಸತ್ಯಾತೆ ಹೊರಗೆ ಬರಲಿದೆ ಎಂದು ಹೇಳಿದ್ದಾರೆ.
ಇನ್ನು ಹೊನ್ನಾಳಿ ಚಂದ್ರಶೇಖರ್ ಸಾವಿಗೆ ಸಂಬಂಧಪಟ್ಟಂತೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ ಸಿಎಂ ನಾಳೆ ಈ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ತಮ್ಮನ ಮಗ ಚಂದ್ರಶೇಖರ್ ಮೃತದೇಹವು ತುಂಗಾ ಕಾಲುವೆಯಲ್ಲಿ ಪತ್ತೆಯಾದ ಪ್ರಕರಣ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇದರ ನಡುವೆ ಡಯಾಟಮ್ ವರದಿ ಪೊಲೀಸರ ಕೈ ಸೇರಿದೆ.
BIGG NEWS : ‘ ಸತೀಶ್ ಜಾರಕಿಹೊಳಿ ಅರೆ ಬರೆ ಓದಿದ ವ್ಯಕ್ತಿ ‘ : ಸಿಎಂ ಬೊಮ್ಮಾಯಿ ವಾಗ್ದಾಳಿ
ವರದಿಯಲ್ಲಿ ಚಂದ್ರು ಸಾವು ಸಜಜ ಎಂದು ಡಯಾಟಮ್ ಪರೀಕ್ಷೆ ವರದಿ ನೀಡಿದೆ. ಶ್ವಾಸಕೋಶದ ಒಳಗೆ ನೀರು ಇರುವುದನ್ನು ಖಚಿತಪಡಿಸಿದೆ. ಶ್ವಾಸಕೋಶದ ಒಳಗೆ ನೀರು ಸೇರಿದರೆ ಚಂದ್ರು ಬದುಕಿದ್ದಾಗಲೇ ನಾಲೆಗೆ ಬಿದ್ದಿರುವ ಸಾಧ್ಯತೆ ಇದೆ ಎನ್ನಲಾಗಿದೆ.