ಹಾವೇರಿ: ಜಿಲ್ಲೆಯಲ್ಲಿ ಘೋರ ದುರಂತ ಎನ್ನುವಂತೆ ಶಾಲೆಯಲ್ಲಿ ಪಾಠ ಕೇಳುತ್ತಿದ್ದಾಗ ವಿದ್ಯುತ್ ಶಾಕ್ ನಿಂದಾಗಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದರೇ, ಮತ್ತಿಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ.
ಹಾವೇರಿ ಜಿಲ್ಲೆಯ ಹಿರೇಕೆರೂರಿನ ಹಂಸಬಾವಿ ಗ್ರಾಮದಲ್ಲಿ ಇರುವಂತ ಮೃತ್ಯುಂಜಯ ಶಾಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಶಾಲೆಯಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು, ವಿದ್ಯುತ್ ಶಾಕ್ ನಿಂದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
BREAKING: UGCET, UGNEET-2025ರ ಅಣಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಿದ ಕೆಇಎ