ಬೆಂಗಳೂರು : ಬೆಂಗಳೂರಲ್ಲಿ ಘೋರ ಘಟನೆ ನಡೆದಿದ್ದು, ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ 13ನೇ ಕ್ರಾಸ್ ನಲ್ಲಿರುವ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ.
ಕಟ್ಟಡದಿಂದ ಕೆಳಗೆ ಬಿದ್ದಿದ್ದರಿಂದ ವಿದ್ಯಾರ್ಥಿನಿಯ ತಲೆಗೆ ಗಂಭೀರವಾದ ಗಾಯಗಳಾಗಿವೆ. ವಿದ್ಯಾರ್ಥಿನಿಯನ್ನು ತಕ್ಷಣ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಿಗ್ಗೆ ತಿಂಡಿ ತಿನ್ನದೇ ಬಾಲಕಿ ಶಾಲೆಗೆ ಬಂದಿದ್ದಾಳೆ ಈ ವೇಳೆ ಕಟ್ಟಡದಿಂದ ಕೆಳಗೆ ನೋಡಿದಾಗ ತಲೆ ಸುತ್ತಿ ಕಟ್ಟಡದಿಂದ ಬಿದ್ದಿದ್ದಾಳೆ ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ. ಆಸ್ಪತ್ರೆಗೆ ಸ್ಥಳೀಯ ಶಾಸಕ ಡಾ. ಅಶ್ವತ್ ನಾರಾಯಣ ಭೇಟಿ ನೀಡಿ, ವಿದ್ಯಾರ್ಥಿನಿಯ ಆರೋಗ್ಯ ವಿಚಾರಿಸಿದ್ದಾರೆ.