ಬಾಗಲಕೋಟೆ: ಗಣತಿ ಕಾರ್ಯಕ್ಕೆ ಹೋದ ಶಿಕ್ಷಕಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ ತಾಲೂಕಿನ ಬೋಡನಾಯಕನದಿನ್ನಿ ಕ್ರಾಸ್ ಬಳಿ ನಡೆದಿದೆ.
ದಾನಮ್ಮ ವಿಜಯಕುಮಾರ ನಂದರಗಿ (52) ಸಾವನ್ನಪ್ಪಿರುವ ಶಿಕ್ಷಕಿ. ಗಣತಿ ಕಾರ್ಯ ಮುಗಿಸಿಕೊಂಡು ಪುತ್ರನ ಜೊತೆ ಮನೆ ಕಡೆಗೆ ಬೈಕಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದೆ.
ತಾಲೂಕಿನ ರಾಂಪುರ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕಿ ದಾನಮ್ಮ ನಂದರಗಿ (45) ಮೃತ ಶಿಕ್ಷಕಿ. ಬಾಗಲಕೋಟೆ ತಾಲೂಕಿನ ಸೀತಿಮನಿ ಗ್ರಾಮಕ್ಕೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ ಪುತ್ರನ ಜೊತೆ ಬೈಕ್ ಮೇಲೆ ಬಾಗಲಕೋಟೆಯತ್ತ ಬರು ವಾಗ ಬೋಡನಾಯಕನದಿನ್ನಿ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ಬೈಕ್ ಉರುಳಿ ತಲೆಗೆ ತೀವ್ರ ಪೆಟ್ಟಾಗಿ ಮೃತಪಟ್ಟಿದ್ದಾರೆ.