ಬಾಗಲಕೋಟೆ : ಖಾಸಗಿ ಶಾಲೆಯ ಮನೆ ಬಸ್ ಪಲ್ಟಿಯಾಗಿ 11 ಮಕ್ಕಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮುಧೋಳ ತಾಲೂಕಿನ ಲೋಕಾಪುರ ಪಟ್ಟಣದ ಬಳಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಪಟ್ಟಣದಲ್ಲಿ ರಾಯಲ್ ಪ್ಯಾಲೇಸ್ ಇಂಟರ್ನ್ಯಾಷನಲ್ ಶಾಲೆಯ ಖಾಸಗಿ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿ 11 ಮಕ್ಕಳಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳು ಮಕ್ಕಳಿಗೆ ಲೋಕಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಲೋಕಾಪುರದ ಕಡೆಗೆ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿಯಾಗಿದೆ.