Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಒಂದೇ ದಾಳಿಗೆ ಇರಾನ್‌ನ 48 ಪ್ರಮುಖ ನಾಯಕರು ಫಿನಿಶ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

01/03/2026 9:58 PM

‘ಗ್ರಾಮ ವಾಸ್ತವ್ಯ’ದ ಮೂಲಕ ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ’ಗೆ ನಾಂದಿ: ಎಲ್ಲರಿಗೂ ಮಾದರಿಯಾದ ‘PSI’

01/03/2026 9:36 PM

BREAKING: ಇಸ್ರೇಲ್, ಅಮೇರಿಕಾ ದಾಳಿಯಲ್ಲಿ ಇರಾನ್ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಸಾವು | Ahmadinejad

01/03/2026 8:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ದ್ವಿ-ಚಕ್ರ ವಾಹನ ಕದಿಯುತ್ತಿದ್ದ ಓರ್ವ ಕಳ್ಳ ಅರೆಸ್ಟ್, 16 ಲಕ್ಷ ಮೌಲ್ಯದ 8 ಬೈಕ್ ಜಪ್ತಿ
KARNATAKA

ಬೆಂಗಳೂರಲ್ಲಿ ದ್ವಿ-ಚಕ್ರ ವಾಹನ ಕದಿಯುತ್ತಿದ್ದ ಓರ್ವ ಕಳ್ಳ ಅರೆಸ್ಟ್, 16 ಲಕ್ಷ ಮೌಲ್ಯದ 8 ಬೈಕ್ ಜಪ್ತಿ

By kannadanewsnow0922/08/2025 12:50 PM

ಬೆಂಗಳೂರು: ನಗರದಲ್ಲಿ ದ್ವಿಚಕ್ರ ವಾಹನ ಕದಿಯುತ್ತಿದ್ದಂತ ಓರ್ವ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 16 ಲಕ್ಷ ಮೌಲ್ಯದ 8 ಬೈಕ್ ಗಳನ್ನು ಜಪ್ತಿ ಮಾಡಿದ್ದಾರೆ.

ಈ ಕುರಿತಂತೆ ಬೆಂಗಳಊರು ನಗರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬಾಣಸವಾಡಿ ಪೊಲೀಸ್ ಠಾಣಾ ಸರಹದ್ದಿನ ಕಾಮರಾಜ ನಗರ, ಹೆಚ್.ಆರ್.ಬಿ.ಆರ್ ಲೇಔಟ್‌ನಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:24/07/2025 ರಂದು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:20/07/2025 ರಂದು ಬೆಳಗ್ಗೆ ಕಮ್ಮನಹಳ್ಳಿ ಮುಖ್ಯರಸ್ತೆಯಲ್ಲಿರುವ ಜ್ಯೂವೆಲ್ಲರಿ ಅಂಗಡಿಯೊಂದರ ಮುಂಭಾಗದಲ್ಲಿ ದ್ವಿ-ಚಕ್ರ ವಾಹನವನ್ನು ನಿಲ್ಲಿಸಿ, ಕೆಲಸಕ್ಕೆ ಹೋಗಿರುತ್ತಾರೆ. ಅದೇ ದಿನ ಸಂಜೆ ವಾಪಸ್ ಬಂದು ನೋಡಲಾಗಿ ದ್ವಿ-ಚಕ್ರ ವಾಹನವನ್ನು ಯಾರೋ ಅಪರಿಚಿತರು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ತಿಳಿಸಿರುತ್ತಾರೆ. ಈ ಕುರಿತು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದ್ವಿ-ಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಭಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:03/08/2025 ರಂದು ಕಮ್ಮನಹಳ್ಳಿ ಮುಖ್ಯರಸ್ತೆಯಲ್ಲಿರುವ ಟೀ ಅಂಗಡಿಯೊಂದರ ಬಳಿ ಓರ್ವ ವ್ಯಕ್ತಿಯು ನಂಬರ್ ಪ್ಲೇಟ್‌ಯಿಲ್ಲದ ಒಂದು ದ್ವಿ-ಚಕ್ರ ವಾಹನವನ್ನು ನಿಲ್ಲಿಸಿಕೊಂಡು ನಿಂತಿದ್ದು, ಆತನನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ದ್ವಿ-ಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ. ಹಾಗೂ ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ದ್ವಿ-ಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ. ಕಳವು ಮಾಡಿದ ದ್ವಿ-ಚಕ್ರ ವಾಹನಗಳನ್ನು ಕೆ.ಜಿ.ಹಳ್ಳಿ, ಸಂಪಿಗೆಹಳ್ಳಿ ಮತ್ತು ಥಣಿಸಂದ್ರದ ವಿವಿಧ ಜಾಗಗಳಲ್ಲಿ ನಿಲ್ಲಿಸಿರುವುದಾಗಿ ತಿಳಿಸಿರುತ್ತಾನೆ.

ದಿನಾಂಕ:04/08/2025 ರಂದು ಆರೋಪಿಯು ನೀಡಿದ ಮಾಹಿತಿ ಮೇರೆಗೆ ಕೆ.ಜಿ.ಹಳ್ಳಿ, ಸಂಪಿಗೆಹಳ್ಳಿ, ಥಣಿಸಂದ್ರದ ವಿವಿಧ ಜಾಗಗಳಲ್ಲಿ ನಿಲ್ಲಿಸಿದ್ದ 7 ದ್ವಿ-ಚಕ್ರ ವಾಹನಗಳನ್ನು ವಶ ಪಡಿಸಿಕೊಳ್ಳಲಾಯಿತು.

ಈ ಪ್ರಕರಣದ ಆರೋಪಿಯ ಬಂಧನದಿಂದ ಒಟ್ಟು 8 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ 16,00,000/-(ಆರು ಲಕ್ಷ ರೂಪಾಯಿ).

ಈ ಪ್ರಕರಣದ ಆರೋಪಿಯ ಬಂಧನದಿಂದ 1) ಬಾಣಸವಾಡಿ ಪೊಲೀಸ್ ಠಾಣೆಯ-04 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು, 2) ರಾಮಮೂರ್ತಿನಗರ ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ, 3) ಬೇಗೂರು ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ, 4) ಯಲಹಂಕ ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ ಸೇರಿದಂತೆ, ಒಟ್ಟು 7 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿದ್ದು, 1 ದ್ವಿ-ಚಕ್ರ ವಾಹನದ ಮಾಲೀಕರು ಪತ್ತೆಯಾಗಬೇಕಾಗಿರುತ್ತದೆ. ತನಿಖೆ ಪ್ರಗತಿಯಲ್ಲಿದೆ.

ದಿನಾಂಕ:04/08/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.

ಈ ಕಾರಾಚರಣೆಯನ್ನು ಪೂರ್ವ ವಿಭಾಗದ ಉಪ-ಪೊಲೀಸ್ ಕಮೀಷನರ್ ದೇವರಾಜ್, ಐ.ಪಿ.ಎಸ್.ರವರ ಮಾರ್ಗದರ್ಶನದಲ್ಲಿ ಬಾಣಸವಾಡಿ ಉಪ ವಿಭಾಗದ ಸಹಾಯಕ ಪೊಲೀಸ್ ಕಮೀಷನರ್, ಉಮಾಶಂಕರ್.ಎಂ.ಹೆಚ್. ರವರ ನೇತೃತ್ವದಲ್ಲಿ ಬಾಣಸವಾಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಅರುಣ್ ಸಾಳುಂಕೆ ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

Share. Facebook Twitter LinkedIn WhatsApp Email

Related Posts

‘ಗ್ರಾಮ ವಾಸ್ತವ್ಯ’ದ ಮೂಲಕ ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ’ಗೆ ನಾಂದಿ: ಎಲ್ಲರಿಗೂ ಮಾದರಿಯಾದ ‘PSI’

01/03/2026 9:36 PM4 Mins Read

ವಸತಿ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಗಂಡ-ಹೆಂಡತಿ ಜೈಲುಪಾಲು!

01/03/2026 8:29 PM2 Mins Read

ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ: ಕೇಂದ್ರ ಸರ್ಕಾರಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ

01/03/2026 7:30 PM1 Min Read
Recent News

BREAKING: ಒಂದೇ ದಾಳಿಗೆ ಇರಾನ್‌ನ 48 ಪ್ರಮುಖ ನಾಯಕರು ಫಿನಿಶ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

01/03/2026 9:58 PM

‘ಗ್ರಾಮ ವಾಸ್ತವ್ಯ’ದ ಮೂಲಕ ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ’ಗೆ ನಾಂದಿ: ಎಲ್ಲರಿಗೂ ಮಾದರಿಯಾದ ‘PSI’

01/03/2026 9:36 PM

BREAKING: ಇಸ್ರೇಲ್, ಅಮೇರಿಕಾ ದಾಳಿಯಲ್ಲಿ ಇರಾನ್ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಸಾವು | Ahmadinejad

01/03/2026 8:41 PM

US Israel Iran War: ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್: ಕೇವಲ 12 ಗಂಟೆಗಳಲ್ಲಿ 900ಕ್ಕೂ ಹೆಚ್ಚು ದಾಳಿ!

01/03/2026 8:36 PM
State News
KARNATAKA

‘ಗ್ರಾಮ ವಾಸ್ತವ್ಯ’ದ ಮೂಲಕ ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ’ಗೆ ನಾಂದಿ: ಎಲ್ಲರಿಗೂ ಮಾದರಿಯಾದ ‘PSI’

By kannadanewsnow0901/03/2026 9:36 PM KARNATAKA 4 Mins Read

ಶಿವಮೊಗ್ಗ: ಸಾಮಾನ್ಯವಾಗಿ ಪೊಲೀಸ್ ಎಂದರೆ ಸಾಮಾನ್ಯ ಜನರಿಗೆ ಒಂದು ರೀತಿಯ ಭಯ, ಆತಂಕ. ಪೊಲೀಸರ ಬಳಿ ಹೋಗುವುದು ಎಂದರೆ ಏನೋ…

ವಸತಿ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಗಂಡ-ಹೆಂಡತಿ ಜೈಲುಪಾಲು!

01/03/2026 8:29 PM

ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ: ಕೇಂದ್ರ ಸರ್ಕಾರಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ

01/03/2026 7:30 PM

ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಧನುಸ್ಸು ರಾಶಿಯವರಿಗೆ ಅದೃಷ್ಟದ ಬದಲಾವಣೆ

01/03/2026 7:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.