ಬೆಂಗಳೂರು: 2021ರಲ್ಲಿ ಗರಿಷ್ಠ ಪ್ರಮಾಣದಲ್ಲಿ ಸರಿಧಾನ್ಯ ಬೆಳೆದ ಕರ್ನಾಟಕಕ್ಕೆ ‘ಅತ್ಯುತ್ತಮ ರಾಜ್ಯ’ ಪ್ರಶಸ್ತಿ ಬಂದಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ.
‘KSRTC ಸಿಬ್ಬಂದಿ’ಗಳಿಗೆ ಮತ್ತೊಂದು ಗುಡ್ ನ್ಯೂಸ್: ಇದೇ ಮೊದಲ ಬಾರಿಗೆ 50 ಲಕ್ಷ ರೂ ‘ಅಪಘಾತ ವಿಮೆ ಯೋಜನೆ’ ಜಾರಿ
ನಗರದಲ್ಲಿ ಮಾತನಾಡಿದ ಅವರು, ಮುಂದಿನ ವರ್ಷ ಅಂದರೆ 2023ರ ಜನವರಿ 20, 21 ಮತ್ತು 22 ರಂದು ನಗರದಲ್ಲಿ ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಆಯೋಜಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ವಿದೇಶಗಳಲ್ಲಿ ರೈತರಿಗೆ ಸಿರಿಧಾನ್ಯದ ಬಗ್ಗೆ ಅರಿವು ಮೂಡಿಸಬೇಕಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸಿರಿಧಾನ್ಯಗಳ ಬಗ್ಗೆ ಜಾಗೃತಿ ಮೂಡಿದೆ. ಪ್ರಧಾನಿ ನರೇಂದ್ರ ಮೋದಿ ಸಹ ಸಿರಿಧಾನ್ಯದ ಬಗ್ಗೆ ಮಾತನಾಡಿದ್ದಾರೆ. ಸಿರಿಧಾನ್ಯ ಮೇಳದಲ್ಲಿ ವ್ಯಾಪಾರಸ್ಥರು, ರಫ್ತುದಾರರು ಕೂಡ ಭಾಗಿಯಾಗಲಿದ್ದಾರೆ. ಸಿಎಂ ಮೂಲಕ ಪ್ರಧಾನಿಗೂ ಆಹ್ವಾನ ನೀಡುತ್ತೇವೆ. ಅವರು ಬಂದರೆ ನಮ್ಮ ಶಕ್ತಿ ಮತ್ತಷ್ಟು ಹೆಚ್ಚಲಿದೆ ಎಂದರು.