ಯಾದಗಿರಿ: ಜಿಲ್ಲೆಯಲ್ಲಿ ಮೋಟಾರ್ ಪಂಪ್ ಸೆಟ್ ದುರಸ್ತಿ ವೇಳೆಯಲ್ಲಿ ವಿದ್ಯುತ್ ತಗುಲಿ ಮೂವರು ರೈತರು ದುರ್ಮರಣ ಹೊಂದಿರುವಂತ ಧಾರುಣ ಘಟನೆ ನಡೆದಿದೆ.
ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಆಗತೀರ್ಥ ಗ್ರಾಮದಲ್ಲಿ ಮೋಟರ್ ಪಂಪ್ ಸೆಟ್ ದುರಸ್ತಿಯಲ್ಲಿ ರೈತರು ತೊಡಗಿದ್ದರು. ಈ ಸಂದರ್ಭದಲ್ಲಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೂವರು ರೈತರು ಸಾವನ್ನಪ್ಪಿದ್ದಾರೆ.
ಮೃತರನ್ನು ರೈತ ಈರಪ್ಪ (40) ದೇವು(30) ಹಾಗೂ ಸುರೇಶ್ (22) ಎಂಬುದಾಗಿ ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಗತೀರ್ಥ ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಚಾಲನೆ
ರಸಗೊಬ್ಬರ ದಾಸ್ತಾನು ಬಗ್ಗೆ ರೈತರಿಗೆ ಸಮರ್ಪಕ ಮಾಹಿತಿ ನೀಡಲು ಸಚಿವ ಶರಣಪ್ರಕಾಶ್ ಪಾಟೀಲ್ ಸೂಚನೆ