ಶಿವಮೊಗ್ಗ: ರಾಜ್ಯದಲ್ಲಿ ವಿನೂತನ ಪ್ರತಿಭಟನೆ ಎನ್ನುವಂತೆ, ಯೋಜನೆಯೊಂದನ್ನು ವಿರೋಧಿಸಿ ಜಾನುವಾರುಗಳ ಮೇಲೆ ದೀಪಾವಳಿ ಹಬ್ಬದ ಆಚರಣೆಯ ವೇಳೆಯಲ್ಲಿ ವಿರೋಧದ ಬರವಣಿಗೆ ಬರೆದು ಪ್ರತಿಭಟನೆ ನಡೆಸಲಾಗಿದೆ. ಅದೆಲ್ಲಿ ಅಂತ ಮುಂದೆ ಓದಿ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಶರಾವತಿ ಪಂಪ್ ಸ್ಟೋರೇಜ್ ಯೋಜನೆ ವಿರೋಧಿಸಿ ರೈತ ಮುಖಂಡ ದಿನೇಶ್ ಶಿರವಾಳ ನೇತೃತ್ವದಲ್ಲಿ ಕೆಲ ದಿನಗಳ ಹಿಂದೆ ಎಸಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸಲಾಗಿತ್ತು. ಈ ಪ್ರತಿಭಟನೆಗೆ ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದಂತ ವಿವಿಧ ಮುಖಂಡರು ಭಾಗಿಯಾಗಿ ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ವಿರೋಧ ವ್ಯಕ್ತ ಪಡಿಸಿದ್ದರು.
ಈ ಪ್ರತಿಭಟನೆಯ ನಂತ್ರ ಶಿವಮೊಗ್ಗ ಜಿಲ್ಲಾ ರೈತ ಸಂಘದ ಅಧ್ಯಕ್ಷ ದಿನೇಶ್ ಶಿರವಾಳ ಅವರು ಅಕ್ಟೋಬರ್.29ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಮುಂದಿನ ನಡೆಯ ಬಗ್ಗೆ ವಿವಿಧ ಮಠಾಧೀಶರು, ಮುಖಂಡರ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತಿದೆ. ಈ ಸಭೆಯಲ್ಲಿ ಶರಾವತಿ ಪಂಪ್ ಸ್ಟೋರೇಜ್ ವಿರೋಧದ ಮುಂದಿನ ನಡೆಯ ಬಗ್ಗೆ ನಿರ್ಧಾರ ಪ್ರಕಟಿಸುವುದಾಗಿಯೂ ತಿಳಿಸಿದ್ದರು.
ಇದರ ನಡುವೆ ಮಲೆನಾಡಿನಲ್ಲಿ ಗಮನ ಸೆಳೆಯುವಂತ ದೀಪಾವಳಿ ಹಬ್ಬದ ಸಡಗರ ಸಂಭ್ರಮದ ನಡುವೆ, ತಮ್ಮ ಮನೆಯ ಜಾನುವಾರುಗಳಿಗೆ ಸಂಪ್ರದಾಯದಂತೆ ಬಣ್ಣ ಬಳಿದು, ಮೈಮೈಲೆ ಚಿತ್ತಾರ ಬಿಡಿಸೋ ಬದಲಾಗಿ, ಶರಾವತಿ ಪಂಪ್ ಸ್ಟೋರೇಜ್ ಯೋಜನೆ ಬೇಡ ಎಂಬುದಾಗಿ ವಿರೋಧದ ಬರವಣಿಗೆಯನ್ನು ಬರೆದಿದ್ದಾರೆ. ಆ ಮೂಲಕ ರಾಜ್ಯದಲ್ಲೇ ವಿನೂತನ ಪ್ರತಿಭಟನೆ ಎನ್ನುವಂತೆ ಜಾನುವಾರುಗಳ ಮೇಲೆ ಶರಾವತಿ ಪಂಪ್ ಸ್ಟೋರೇಜ್ ಯೋಜನೆ ವಿರೋಧಿ ಬರವಣಿಗೆಯ ಮೂಲಕ ಸರ್ಕಾರದ ಗಮನವನ್ನು ಸೆಳೆದಿದ್ದಾರೆ. ಈ ಯೋಜನೆಯನ್ನು ಶಿವಮೊಗ್ಗ ಜಿಲ್ಲಾ ರೈತ ಸಂಘದ ಅಧ್ಯಕ್ಷ ದಿನೇಶ್ ಶಿರವಾಳ ಅವರ ಪ್ರತಿಭಟನೆಗೆ ಮಣಿದು ಸರ್ಕಾರ ಕೈ ಬಿಡುತ್ತಾ ಎಂಬುದನ್ನು ಕಾದು ನೋಡಬೇಕಿದೆ.
ವರದಿ; ವಸಂತ ಬಿ ಈಶ್ವರಗೆರೆ…, ಸಂಪಾದಕರು
‘ಸಿಎಂ ಬದಲಾವಣೆ ವಿಷಯ’ ಮರೆಮಾಚಲು ‘RSS’ ವಿಷಯ ಪ್ರಸ್ತಾಪ: ಪ್ರತಿಪಕ್ಷ ನಾಯಕ ಆರ್.ಅಶೋಕ್
ಈ ರಾಜ್ಯಕ್ಕೆ ಕಾಂಗ್ರೆಸ್ ಸರ್ಕಾರ ಮಾರಕ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ