Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರ ಗ್ರಾಮಾಂತರದಲ್ಲಿ ಜಾನುವಾರು ಕಳ್ಳರ ಹಾವಳಿ: ತಡೆಗೆ ಪೊಲೀಸ್‌ ಇಲಾಖೆ ಖಡಕ್‌ ಕ್ರಮ, ಈ ಎಚ್ಚರಿಕೆ

12/03/2026 7:05 PM

ನಿಮ್ಮ ಎಲ್ಲಾ ಸಮಸ್ಯೆಗಳು ದೂರ ಆಗಬೇಕೇ? ರಾತ್ರಿ ಮಲಗುವಾಗ 2 ರೂಪಾಯಿ ನಾಣ್ಯದಿಂದ ಹೀಗೆ ಮಾಡಿ

12/03/2026 6:45 PM

ಗ್ಯಾಸ್ ಟ್ರಬಲ್ ನಿಂದ ಮರಗಳಿಗೆ ಕೊಡಲಿ ಭೀತಿ: ಕಟ್ಟೆಚ್ಚರಕ್ಕೆ ಅರಣ್ಯಾಧಿಕಾರಿಗಳಿಗೆ ಈಶ್ವರ ಖಂಡ್ರೆ ಸೂಚನೆ

12/03/2026 6:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೈಸೂರಿನಲ್ಲಿ ಸುಸಜ್ಜಿತ ಪೊಲೀಸ್ ಮ್ಯೂಸಿಯಂ ಸ್ಥಾಪನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್
KARNATAKA

ಮೈಸೂರಿನಲ್ಲಿ ಸುಸಜ್ಜಿತ ಪೊಲೀಸ್ ಮ್ಯೂಸಿಯಂ ಸ್ಥಾಪನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

By kannadanewsnow0925/11/2025 7:08 PM

ಮೈಸೂರು: ಮೈಸೂರಿನಲ್ಲಿ ಸುಸಜ್ಜಿತವಾದ ಕರ್ನಾಟಕ ಪೊಲೀಸ್ ವಸ್ತು ಸಂಗ್ರಹಾಲಯ (ಮ್ಯೂಸಿಯಂ) ಮಾಡಲಾಗುವುದು ಎಂದು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ತಿಳಿಸಿದರು.

ಮೈಸೂರು ಜಿಲ್ಲಾ ಪ್ರವಾಸದ ವೇಳೆ ಕೆಎಸ್‌ಆರ್‌ಪಿ ಆಶ್ವಾರೋಹಿ ದಳ ಕಂಪನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ ಮಾಹಿತಿ ಪಡೆದರು. ಆರಕ್ಷಕ ಅಶ್ವದಳದ ವಸ್ತು ಸಂಗ್ರಹಾಲಯವನ್ನು ವೀಕ್ಷಿಸಿದರು. ನಜರ್‌ಬಾದ್ ಪೊಲೀಸ್ ಠಾಣೆಗೆ ದೀಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಆರಂಭದಿಂದ ಇಲ್ಲಿಯವರೆಗೆ ಬೆಳೆದುಬಂದ ರೀತಿ ಹಾಗೂ ಇಲಾಖೆಗೆ ಸಂಬಂಧಿಸಿದ ನೆನಪಿನಲ್ಲಿ ಉಳಿಯುವಂತಹ ವಸ್ತುಗಳನ್ನು ಕಾಪಾಡಬೇಕಿದೆ. ಈ ನಿಟ್ಟಿನಲ್ಲಿ ಪ್ರಸಿದ್ಧವಾದ ಸುಸಜ್ಜಿತ ಪೊಲೀಸ್ ಮ್ಯೂಸಿಯಂ ಮಾಡಲಾಗುವುದು ಎಂದು ವಿವರಿಸಿದರು.

ನಜರ್‌ಬಾದ್ ಪೊಲೀಸ್ ಠಾಣೆ ಮೈಸೂರಿನಲ್ಲಿ ಅತ್ಯಂತ ಹಳೆಯ ಪೊಲೀಸ್ ಠಾಣೆ. ಬಹಳ ದಿನದಿಂದ ಭೇಟಿ ನೀಡಬೇಕು ಎಂದುಕೊಂಡಿದೆ. ಪೊಲೀಸ್ ಠಾಣೆಯ ಕಾರ್ಯವೈಖರಿಯನ್ನು ಪರಿಶೀಲಿಸಲು ದಿಢೀರ್ ಭೇಟಿ ನೀಡಿದ್ದೇನೆ.

ರೆಕಾರ್ಡ್‌, ಸಶಸ್ತ್ರಗಳನ್ನು ಇಟ್ಟುಕೊಳ್ಳುವುದು ಸೇರಿದಂತೆ ಪರಿಶೀಲನೆ ನಡೆಸಿದ್ದೇನೆ. ನ್ಯೂನತೆಗಳನ್ನು ಸರಿಪಡಿಸಿಕೊಳ್ಳುವಂತೆ ಸೂಚಿಸಿದ್ದೇನೆ. ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದ ನಾಲ್ಕೈದು ಜನರಿಗೆ ಖುದ್ದು ಕರೆ ಮಾಡಿ ವಿಚಾರಿಸಿದೆ.

ಆನ್‌ಲೈನ್‌ ವಂಚನೆಯಾಗಿರುವ ಬಗ್ಗೆ ತಿಳಿಸಿದರು. ವಂಚನೆಯಾದ ಬಳಿಕ 1930 ನಂಬರ್‌ಗೆ ಕರೆ ಮಾಡಿದ್ದಾರೆ. ವಂಚಕರ ಬ್ಯಾಂಕ್ ಖಾತೆ ನಿಷ್ಕ್ರೀಯಗೊಳಿಸಲಾಗಿರುತ್ತದೆ. ಆ‌ ಪ್ರಕರಣದ ತನಿಖೆಯನ್ನು ಫಾಲೋಅಪ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ನಜರ್‌ಬಾದ್ ಪೊಲೀಸ್ ಠಾಣೆಯ ಹೊಸ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ್ದೇನೆ ಎಂದರು.

ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದೇನೆ. ಹೆಚ್ಚಿನಂಶ ಸೈಬರ್ ವಂಚನೆಗೊಳಗಾಗುತ್ತಿದ್ದಾರೆ. ಮೈಸೂರಿನಲ್ಲಿ‌ ಡಿಜಿಟಲ್ ಅರೆಸ್ಟ್, ಹೂಡಿಕೆ ಸೇರಿದಂತೆ ವಿವಿಧ ರೀತಿಯಲ್ಲಿ ಸುಮಾರು 30 ಕೋಟಿ ರೂ.ಯಷ್ಟು ಸೈಬರ್ ವಂಚನೆಯಾಗಿದೆ. ಕಳೆದ ವರ್ಷ 40 ಕೋಟಿ ರೂ.ಯಷ್ಟು ವಂಚನೆಯಾಗಿತ್ತು. ಈ ವರ್ಷ ಕಡಿಮೆಯಾಗಿದೆ. 30 ಕೋಟಿ ರೂಪಾಯಿ ವಂಚನೆಯಲ್ಲಿ 5 ಕೋಟಿ ರೂ. ಪತ್ತೆಹಚ್ಚಲಾಗಿದೆ. ಇದನ್ನು ಯಾವ ರೀತಿ ನಿಯಂತ್ರಣಕ್ಕೆ ತರಬೇಕು ಎಂಬ ನಿಟ್ಟಿನಲ್ಲಿ ಚರ್ಚಿಸಲಾಗಿದೆ. ಬೆಂಗಳೂರಿನಲ್ಲಿ ಕುಳಿತು ಅಮೆರಿಕಾದವರಿಗೆ ಡಿಜಿಟಲ್ ಅರೆಸ್ಟ್ ವಂಚನೆ ಮಾಡುತ್ತಿದ್ದವರ ಬಗ್ಗೆ ಪತ್ತೆಹಚ್ಚಿ ಬಂಧಿಸಿದ್ದೇವೆ ಎಂದರು.

ಪ್ರತಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಿಂದ ಸೈಬರ್ ಲ್ಯಾಬ್ ಮಾಡಲಾಗುತ್ತಿದೆ. ಬೆಂಗಳೂರು ನಗರದಲ್ಲಿ ಈಗಾಗಲೇ ಸೈಬರ್ ಲ್ಯಾಬ್ ಮಾಡಲಾಗಿದೆ. ಪೊಲೀಸ್ ಕಾನ್‌ಸ್ಟೇಬಲ್‌ನಿಂದ ಹಿರಿಯ ಪೊಲೀಸ್ ಅಧಿಕಾರಿವರೆಗೂ ಸೈಬರ್ ಅಪರಾಧದ ಕುರಿತು ತಾಂತ್ರಿಕ ಜ್ಞಾನ ಹಾಗೂ ತರಬೇತಿ ಇರಬೇಕು. ಈ ಎರಡು ವರ್ಷದೊಳಗೆ ಇಲಾಖೆಯ ಎಲ್ಲ ಸಿಬ್ಬಂದಿಗಳಿಗೂ ಹಂತಹಂತವಾಗಿ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

ರಾಷ್ಟ್ರೀಯ ಪೊಲೀಸ್ ಆಯೋಗದಿಂದ ಒಬ್ಬ ಪೊಲೀಸ್ ಎಷ್ಟು ತಾಸು ಕೆಲಸ ಮಾಡಬೇಕು ಎಂಬ ಬಗ್ಗೆ ಸೂಚನೆ ಇದೆ. ಕೆಲವು ಸಂದರ್ಭಗಳಲ್ಲಿ ಅದು ಸಾಧ್ಯವಾಗುವುದಿಲ್ಲ. ಪಿಎಸ್‌ಐ ಅಕ್ರಮದಿಂದ ನೇಮಕಾತಿ ಸ್ಥಗಿತವಾಗಿತ್ತು. ಇದೆಲ್ಲ ಸಮಸ್ಯೆಯನ್ನು ನಿವಾರಿಸಿ, ನೇಮಕಾತಿ ಮಾಡಿ 900ಕ್ಕೂ ಹೆಚ್ಚು ಪಿಎಸ್‌ಐಗಳನ್ನು ತರಬೇತಿಗೆ ಕಳುಹಿಸಲಾಗಿದೆ. ಎರಡು ತಿಂಗಳಲ್ಲಿ ತರಬೇತಿ ಪಡೆದು, ಕರ್ತವ್ಯಕ್ಕೆ ಬರುತ್ತಾರೆ. ಅಲ್ಲಿವರೆಗೂ ಎಲ್ಲವನ್ನು ನಿಭಾಯಿಸಿಕೊಂಡು ಹೋಗಬೇಕು ಎಂದು ಹೇಳಿದರು.

ಸೈಬರ್ ಅಪರಾಧದ ಕುರಿತು ಹೆಚ್ಚಿನ ರೀತಿಯಲ್ಲಿ ಜಾಗೃತಿ ಮೂಡಿಲಾಗುತ್ತಿದೆ. ವಿದ್ಯಾವಂತರು ಹೆಚ್ಚಿನ ರೀತಿಯಲ್ಲಿ ವಂಚನೆಗೆ ಒಳಗಾಗುತಿದ್ದಾರೆ. ಬೆಂಗಳೂರಿನಲ್ಲಿ ಇತ್ತೀಚೆಗೆ ಟೆಕ್ಕಿಯೊಬ್ಬರು ನಿರಂತರವಾಗಿ 32 ಕೋಟಿ ರೂ. ವಂಚನೆಗೊಳಗಾಗಿದ್ದಾರೆ. ಸಾಫ್ಟ್‌ವೇರ್ ಕಂಪನಿಯಲ್ಲಿ ಉನ್ನತ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಈ ರೀತಿಯ ವಂಚನೆಗೆ ಸಿಲುಕುತ್ತಿದ್ದಾರೆ ಎಂದರು.

ಪೊಲೀಸ್ ಇಲಾಖೆಯ ಅಧಿಕಾರಿಗಳ ವರ್ಗಾವಣೆಗೆ ಕೆಲವು ನಿಯಮಗಳನ್ನು ರೂಪಿಸಲಾಗಿದೆ. ಒಂದು ವರ್ಷಕ್ಕೆ ವರ್ಗಾವಣೆ ಮಾಡುವ ನಿಯಮವಿತ್ತು. ಇದರಿಂದ ನಮಗು ಒತ್ತಡ ಮತ್ತು ಇಲಾಖೆಯಲ್ಲಿ ಸರಿಯಾಗಿ ಕೆಲಸಗಳಾಗುತ್ತಿರಲಿಲ್ಲ. ಈಗ ವರ್ಗಾವಣೆ ಮಾಡಲು ಎರಡು ವರ್ಷ ಆಗಿರಲೇಬೇಕು. ಇದರಿಂದ ಸ್ವಲ್ಪಮಟ್ಟಿಗೆ ಸುಧಾರಣೆಯಾಗಿದೆ‌. ಪೊಲೀಸ್ ಇಲಾಖೆಯಲ್ಲಿ ಹಂತಹಂತವಾಗಿ ಹಲವು ಬದಲಾವಣೆಗಳನ್ನು ತರಲಾಗುವುದು ಎಂದು ತಿಳಿಸಿದರು.

ರಾಜ್ಯ ರಾಜಕೀಯದ ಪ್ರಸಕ್ತ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಯಾವುದೇ ರೀತಿಯ ಉತ್ತರ ನೀಡುವುದಿಲ್ಲ. ಬಹಳ ಜನ ಇದರ ಬಗ್ಗೆ ಮಾತನಾಡುತ್ತಿದ್ದಾರೆ‌. ಆದ್ದರಿಂದ ನಾನು ಮಾತನಾಡುವುದು ಸೂಕ್ತವಲ್ಲ. ಸದ್ಯಕ್ಕೆ ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವುದಿಲ್ಲ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ವಲಯ ಐಜಿಪಿ ಡಾ.‌ ಎಂ.ಬಿ.ಬೋರಲಿಂಗಯ್ಯ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಡಿಸಿಪಿ ಬಿಂದುಮಣಿ, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವಿಷ್ಣುವರ್ಧನ್, ಕೆಪಿಸಿಸಿ ವಕ್ತಾರ ಹೆಚ್.ಎ.ವೆಂಕಟೇಶ್ ಅವರು ಇದ್ದರು.

ಶ್ರೀರಂಗಪಟ್ಟಣ ತಾಲ್ಲೂಕಲ್ಲಿ ಹನುಮ ಜಯಂತಿ ಉತ್ಸವ: ಅಹಿತಕರ ಘಟನೆ ನಡೆಯದಂತೆ ಡಿಸಿ, ಎಸ್ಪಿ ಶಾಂತಿ ಸಭೆ

ಮಂಡ್ಯ ಕೃಷಿ ವಿವಿಗೆ ಮೂಲಸೌಕರ್ಯ ಕಲ್ಪಿಸಲು 100 ಕೋಟಿ ಅನುದಾನ: ಸಚಿವ ಎನ್.ಚಲುವರಾಯಸ್ವಾಮಿ

Share. Facebook Twitter LinkedIn WhatsApp Email

Related Posts

ಸಾಗರ ಗ್ರಾಮಾಂತರದಲ್ಲಿ ಜಾನುವಾರು ಕಳ್ಳರ ಹಾವಳಿ: ತಡೆಗೆ ಪೊಲೀಸ್‌ ಇಲಾಖೆ ಖಡಕ್‌ ಕ್ರಮ, ಈ ಎಚ್ಚರಿಕೆ

12/03/2026 7:05 PM2 Mins Read

ನಿಮ್ಮ ಎಲ್ಲಾ ಸಮಸ್ಯೆಗಳು ದೂರ ಆಗಬೇಕೇ? ರಾತ್ರಿ ಮಲಗುವಾಗ 2 ರೂಪಾಯಿ ನಾಣ್ಯದಿಂದ ಹೀಗೆ ಮಾಡಿ

12/03/2026 6:45 PM2 Mins Read

ಗ್ಯಾಸ್ ಟ್ರಬಲ್ ನಿಂದ ಮರಗಳಿಗೆ ಕೊಡಲಿ ಭೀತಿ: ಕಟ್ಟೆಚ್ಚರಕ್ಕೆ ಅರಣ್ಯಾಧಿಕಾರಿಗಳಿಗೆ ಈಶ್ವರ ಖಂಡ್ರೆ ಸೂಚನೆ

12/03/2026 6:36 PM1 Min Read
Recent News

ಸಾಗರ ಗ್ರಾಮಾಂತರದಲ್ಲಿ ಜಾನುವಾರು ಕಳ್ಳರ ಹಾವಳಿ: ತಡೆಗೆ ಪೊಲೀಸ್‌ ಇಲಾಖೆ ಖಡಕ್‌ ಕ್ರಮ, ಈ ಎಚ್ಚರಿಕೆ

12/03/2026 7:05 PM

ನಿಮ್ಮ ಎಲ್ಲಾ ಸಮಸ್ಯೆಗಳು ದೂರ ಆಗಬೇಕೇ? ರಾತ್ರಿ ಮಲಗುವಾಗ 2 ರೂಪಾಯಿ ನಾಣ್ಯದಿಂದ ಹೀಗೆ ಮಾಡಿ

12/03/2026 6:45 PM

ಗ್ಯಾಸ್ ಟ್ರಬಲ್ ನಿಂದ ಮರಗಳಿಗೆ ಕೊಡಲಿ ಭೀತಿ: ಕಟ್ಟೆಚ್ಚರಕ್ಕೆ ಅರಣ್ಯಾಧಿಕಾರಿಗಳಿಗೆ ಈಶ್ವರ ಖಂಡ್ರೆ ಸೂಚನೆ

12/03/2026 6:36 PM

15 ದಿನಗಳ ಕಾಲ ‘ಬೆಳ್ಳುಳ್ಳಿ’ ಹೀಗೆ ತಿಂದರೆ, ನಿಮ್ಮ ದೇಹದಲ್ಲಿ ಆಗುವ ಬದಲಾವಣೆಗಳಿವು! ಒಂದೇ ಒಂದು ಎಸಳು ಸಾಕು

12/03/2026 6:30 PM
State News
KARNATAKA

ಸಾಗರ ಗ್ರಾಮಾಂತರದಲ್ಲಿ ಜಾನುವಾರು ಕಳ್ಳರ ಹಾವಳಿ: ತಡೆಗೆ ಪೊಲೀಸ್‌ ಇಲಾಖೆ ಖಡಕ್‌ ಕ್ರಮ, ಈ ಎಚ್ಚರಿಕೆ

By kannadanewsnow0912/03/2026 7:05 PM KARNATAKA 2 Mins Read

ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದನಗಳ ಕಳ್ಳತನ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಿದ್ದು, ಇದು ರೈತಾಪಿ…

ನಿಮ್ಮ ಎಲ್ಲಾ ಸಮಸ್ಯೆಗಳು ದೂರ ಆಗಬೇಕೇ? ರಾತ್ರಿ ಮಲಗುವಾಗ 2 ರೂಪಾಯಿ ನಾಣ್ಯದಿಂದ ಹೀಗೆ ಮಾಡಿ

12/03/2026 6:45 PM

ಗ್ಯಾಸ್ ಟ್ರಬಲ್ ನಿಂದ ಮರಗಳಿಗೆ ಕೊಡಲಿ ಭೀತಿ: ಕಟ್ಟೆಚ್ಚರಕ್ಕೆ ಅರಣ್ಯಾಧಿಕಾರಿಗಳಿಗೆ ಈಶ್ವರ ಖಂಡ್ರೆ ಸೂಚನೆ

12/03/2026 6:36 PM

ಹಾವೇರಿ-ಸಾಗರ ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಚಾಲನೆ; ಭೂಸ್ವಾಧೀನಕ್ಕಾಗಿ 1 ಕೋಟಿ ಅನುದಾನ ಸರ್ಕಾರ ಬಿಡುಗಡೆ

12/03/2026 6:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.