ಬೆಂಗಳೂರು : ಸರ್ಕಾರಿ ಬಸ್ ನಲ್ಲಿ ಕಾಮುಕನೋರ್ವ ಮಹಿಳೆಯ ಜಡೆ ಸವರಿ ಪುಂಡಾಟ ಮೆರೆದಿದ್ದು, ಪೊಲೀಸರು ಕಾಮುಕನ ಬಂಧನಕ್ಕೆ ಬಲೆ ಬೀಸಿದ್ದಾರೆ.
ಬಿ.ಸಿ.ರೋಡಿನಿಂದ ಧರ್ಮಸ್ಥಳದತ್ತ ತೆರಳುತ್ತಿದ್ದ ಸರ್ಕಾರಿ ಬಸ್ನಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಜಡೆಯನ್ನು ಹಿಂದಿನ ಸೀಟ್ನಲ್ಲಿ ಕುಳಿತಿದ್ದ ವ್ಯಕ್ತಿಯೋರ್ವ ಸವರಿದ್ದಾನೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ವ್ಯಕ್ತಿಯ ಹಿಂದೆ ಕುಳಿತಿದ್ದ ಪ್ರಯಾಣಿಕರೊಬ್ಬರು ಇದನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕಾಮುಕನ ಬಂಧನಕ್ಕೆ ಆಗ್ರಹಿಸಿದ್ದಾರೆ.
ರಾಯಚೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ : ವಿವಾಹಿತ ಮಹಿಳೆ ಮೇಲೆ ಗ್ಯಾಂಗ್ ರೇಪ್ ನಡೆಸಿ ಕೊಲೆ
ರಾಯಚೂರು : ವಿವಾಹಿತ ಮಹಿಳೆ ಮೇಲೆ ನಾಲ್ವರು ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ ಘಟನೆ ಸಿಂಧನೂರಿನಲ್ಲಿ ನಡೆದಿದೆ.
ತಾಲೂಕಿನ ಏಳಮೈಲ್ ಕ್ಯಾಂಪಿನ ನಿವಾಸಿ ಮೇಲೆ ಅತ್ಯಾಚಾರ ನಡೆದಿದ್ದು, 5 ಗಂಟೆ ಸುಮಾರಿಗೆ ನಾಲ್ಕುಮೈಲ್ ಕ್ಯಾಂಪಿನ ಹೊರವಲಯದಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಬಳಿಕ ಮಹಿಳೆ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ.
ಗಂಭೀರವಾಗಿ ಹಲ್ಲೆ ನಡೆಸಿದ ಪರಿಣಾಮ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಮೃತಪಟ್ಟಿದ್ದಾಳೆ. ಈ ಸಂಬಂಧ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮಾಳಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
Karnataka Cabinet Expansion : ಇಂದು ಸಿದ್ದರಾಮಯ್ಯ ಸಂಪುಟ ಸೇರಲಿದ್ದಾರೆ 24 ನೂತನ ಸಚಿವರು
BREAKING NEWS : ತೆಲುಗು, ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕ ಕೆ.ವಾಸು ಇನ್ನಿಲ್ಲ |Director K.Vasu No More