Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೇಹದ ಕಲ್ಮಶಗಳನ್ನು ಹೊರಹಾಕುವ ಅದ್ಭುತ ಪಾನೀಯ: ದಿನಕ್ಕೊಂದು ಕಪ್ ಕುಡಿದರೆ ಈ ಕಾಯಿಲೆಗಳೆಲ್ಲ ಮಾಯ !
KARNATAKA

ದೇಹದ ಕಲ್ಮಶಗಳನ್ನು ಹೊರಹಾಕುವ ಅದ್ಭುತ ಪಾನೀಯ: ದಿನಕ್ಕೊಂದು ಕಪ್ ಕುಡಿದರೆ ಈ ಕಾಯಿಲೆಗಳೆಲ್ಲ ಮಾಯ !

By kannadanewsnow57

ಇಂದಿನ ಅವಸರದ ಜೀವನಶೈಲಿ, ಮಾನಸಿಕ ಒತ್ತಡ ಮತ್ತು ಅಸಮರ್ಪಕ ಆಹಾರ ಪದ್ಧತಿಯಿಂದಾಗಿ ಇಂದು ಅನೇಕರು ಗ್ಯಾಸ್ಟ್ರಿಕ್, ಎಸಿಡಿಟಿ, ಮಲಬದ್ಧತೆ ಮತ್ತು ಅಜೀರ್ಣದಂತಹ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಎದೆಯುರಿ, ಹುಳಿ ತೇಗು ಮತ್ತು ಗಂಟಲಿನಲ್ಲಿ ಏನೋ ಸಿಲುಕಿಕೊಂಡಂತಾಗುವುದು ಈ ಸಮಸ್ಯೆಗಳ ಸಾಮಾನ್ಯ ಲಕ್ಷಣಗಳಾಗಿವೆ.

ಸಾಮಾನ್ಯವಾಗಿ ನಾವು ಆಹಾರ ಸೇವಿಸಿದಾಗ ಜಠರದಲ್ಲಿ ಉತ್ಪತ್ತಿಯಾಗುವ ಹೈಡ್ರೋಕ್ಲೋರಿಕ್ ಆಮ್ಲವು ಮೇಲಕ್ಕೆ ಚಿಮ್ಮಿದಾಗ ಎಸಿಡಿಟಿ ಉಂಟಾಗುತ್ತದೆ. ಇಂತಹ ಸಮಸ್ಯೆಗಳಿಗೆ ಪದೇ ಪದೇ ಇಂಗ್ಲಿಷ್ ಮೌಷಧಗಳನ್ನು ಅವಲಂಬಿಸುವ ಬದಲು, ನಮ್ಮ ಹಿರಿಯರು ಪಾಲಿಸುತ್ತಿದ್ದ ಆಯುರ್ವೇದ ಪದ್ಧತಿಗಳು ಹೆಚ್ಚು ಪರಿಣಾಮಕಾರಿ ಎನ್ನುತ್ತಾರೆ ತಜ್ಞರು. ಅಂತಹವುಗಳಲ್ಲಿ ‘ಧನಿಯಾ ಕಷಾಯ’ ಅತ್ಯಂತ ಪ್ರಮುಖವಾದುದು.

ಕಷಾಯ ತಯಾರಿಸುವ ವಿಧಾನ:

ಒಂದು ಪಾತ್ರೆಯಲ್ಲಿ ಅರ್ಧ ಲೀಟರ್ ನೀರನ್ನು ತೆಗೆದುಕೊಳ್ಳಿ.

ಅದಕ್ಕೆ ಒಂದು ಚಮಚ ಧನಿಯಾ, ಒಂದು ಚಮಚ ಜೀರಿಗೆ, 3-4 ಕಾಳುಮೆಣಸು, 3-4 ಲವಂಗ (ಮೊಗ್ಗು ತೆಗೆದದ್ದು) ಮತ್ತು ಒಂದು ಚಿಟಿಕೆ ಅರಿಶಿನ ಹಾಕಿ.

ಈ ಮಿಶ್ರಣವನ್ನು ಒಲೆಯ ಮೇಲಿಟ್ಟು, ನೀರು ಅರ್ಧದಷ್ಟು ಆಗುವವರೆಗೆ ಚೆನ್ನಾಗಿ ಕುದಿಸಿ.

ನಂತರ ಅದನ್ನು ಸೋಸಿಕೊಂಡು, ಉಗುರು ಬೆಚ್ಚಗಿರುವಾಗ ಕುಡಿಯಿರಿ.

ಬಳಸಿದ ಪದಾರ್ಥಗಳ ಆರೋಗ್ಯ ಗುಣಗಳು:

ಧನಿಯಾ: ಇದು ದೇಹವನ್ನು ತಂಪಾಗಿಸುತ್ತದೆ ಮತ್ತು ಗ್ಯಾಸ್, ಎಸಿಡಿಟಿ ಹಾಗೂ ಮಲಬದ್ಧತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಜೀರಿಗೆ: ಜೀರ್ಣಕ್ರಿಯೆಯನ್ನು ಸುಧಾರಿಸುವಲ್ಲಿ ಇದು ಅದ್ಭುತವಾಗಿ ಕೆಲಸ ಮಾಡುತ್ತದೆ.

ಕಾಳುಮೆಣಸು: ಹೊಟ್ಟೆ ಉಬ್ಬರವನ್ನು ಕಡಿಮೆ ಮಾಡುತ್ತದೆ ಮತ್ತು ಜಠರದಲ್ಲಿ ಆಮ್ಲದ ಉತ್ಪತ್ತಿಯನ್ನು ಸಮತೋಲನದಲ್ಲಿಟ್ಟು ಆಹಾರ ಬೇಗ ಜೀರ್ಣವಾಗುವಂತೆ ಮಾಡುತ್ತದೆ.

ಲವಂಗ: ಇದರಲ್ಲಿ ಕ್ಯಾಲ್ಸಿಯಂ, ರಂಜಕ ಮತ್ತು ವಿಟಮಿನ್ ಎ ಸಮೃದ್ಧವಾಗಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಮತ್ತು ಗ್ಯಾಸ್ ತಡೆಯಲು ಸಹಕಾರಿ.

ಅರಿಶಿನ: ಇದರಲ್ಲಿರುವ ಔಷಧೀಯ ಗುಣಗಳು ಜೀರ್ಣಾಂಗವ್ಯೂಹದ ಆರೋಗ್ಯವನ್ನು ಕಾಪಾಡುತ್ತವೆ.

ದಿನನಿತ್ಯದ ಸೇವನೆಯಿಂದಾಗುವ ಇತರ ಪ್ರಯೋಜನಗಳು:

ಈ ಕಷಾಯವನ್ನು ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸುವುದರಿಂದ ಈ ಕೆಳಗಿನ ಲಾಭಗಳನ್ನು ಪಡೆಯಬಹುದು:

ಹೃದಯದ ಆರೋಗ್ಯ: ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಿ ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಯುತ್ತದೆ.

ರೋಗನಿರೋಧಕ ಶಕ್ತಿ: ಸೋಂಕುಗಳ ವಿರುದ್ಧ ಹೋರಾಡುವ ಶಕ್ತಿಯನ್ನು ದೇಹಕ್ಕೆ ನೀಡುತ್ತದೆ.

ಸಾಮಾನ್ಯ ಕಾಯಿಲೆಗಳು: ಶೀತ, ಕೆಮ್ಮು, ಜ್ವರ ಮತ್ತು ಅತಿಸಾರಕ್ಕೆ ಇದು ಉತ್ತಮ ಮನೆಮದ್ದು.

ದೇಹದ ಶುದ್ಧೀಕರಣ: ಹೊಟ್ಟೆಯಲ್ಲಿರುವ ಜಂತುಹುಳುಗಳನ್ನು ನಾಶಪಡಿಸಲು ಸಹಾಯ ಮಾಡುತ್ತದೆ.

ಮಧುಮೇಹ ಮತ್ತು ಥೈರಾಯ್ಡ್: ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುವುದರ ಜೊತೆಗೆ ಹಾರ್ಮೋನ್ ಸಮತೋಲನಕ್ಕೆ ಸಹಕರಿಸುತ್ತದೆ.

A wonderful drink that removes impurities from the body: If you drink one cup a day all these diseases will disappear!
Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

2 Mins Read

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

1 Min Read

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

1 Min Read
Recent News

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

ನೈಸರ್ಗಿಕ ಪೋಷಕಾಂಶಗಳ ಗಣಿ: ಪ್ರತಿದಿನ ಮೊಳಕೆ ಕಾಳುಗಳನ್ನು ತಿನ್ನುವುದರಿಂದಾಗುವ 7 ಲಾಭಗಳು

State News
KARNATAKA

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆಯುತ್ತಿರುವ ಭೂ ಮಾಫಿಯಾದ ಭೀಕರ ದಂಧೆಯೊಂದು ಬಯಲಿಗೆ ಬಂದಿದೆ. ಸತ್ತವರ ಹೆಸರಿನಲ್ಲಿ ನಕಲಿ…

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.