ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪುಂಡರ ಅಟ್ಟಹಾಸ ಮುಂದುವರಿದಿದ್ದು, ಮಾಗಡಿ ರಸ್ತೆಯ ಅಗ್ರಹಾರ ದಾಸರಹಳ್ಳಿ ಬಳಿ ಯುವಕನೋರ್ವನ ಮೇಲೆ ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ನಡೆಸಲಾದ ಘಟನೆ ನಡೆದಿದೆ.
ಇಬ್ಬರು ಯುವಕರು ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಹಲ್ಲೆಗೊಳಗಾದ ಯುವಕ ತೀವ್ರವಾಗಿ ಗಾಯಗೊಂಡಿದ್ದಾನೆ ಎನ್ನಲಾಗಿದೆ. ಹಳೆಯ ದ್ವೇಷ ಅಥವಾ ಕ್ಷುಲ್ಲಕ ಕಾರಣಕ್ಕೆ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ಸಾರ್ವಜನಿಕ ಪ್ರದೇಶದಲ್ಲೇ ನಡೆದ ಈ ಡೆಡ್ಲಿ ಅಟ್ಯಾಕ್‌ನಿಂದಾಗಿ ಸ್ಥಳೀಯ ನಿವಾಸಿಗಳಲ್ಲಿ ಕೆಲ ಕಾಲ ಆತಂಕ ಮೂಡಿತ್ತು.
ವಿಷಯ ತಿಳಿಯುತ್ತಿದ್ದಂತೆಯೇ ಮಾಗಡಿ ರಸ್ತೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದ ಸುತ್ತಮುತ್ತಲಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿರುವ ಪೊಲೀಸರು, ಹಲ್ಲೆ ನಡೆಸಿ ಪರಾರಿಯಾಗಿರುವ ಇಬ್ಬರು ಆರೋಪಿಗಳ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ.
ಈ ಕುರಿತು ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ವೃದ್ಧ ದಂಪತಿಗಳ ಮನೆ ಬಾಗಿಲಿಗೆ ‘ಸರ್ಕಾರಿ ಸೌಲಭ್ಯ; ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಮಾನವೀಯತೆ
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11 ರಿಂದ `OPD’ ಸೇವೆ ಬಂದ್: ರೋಗಿಗಳಿಗೆ ಸಂಕಷ್ಟದ ಭೀತಿ








