ನವದೆಹಲಿ: ಆಧಾರ್ ( Aadhaar ) ಅನ್ನು ಪೌರತ್ವದ ನಿರ್ಣಾಯಕ ಪುರಾವೆಯಾಗಿ ಪರಿಗಣಿಸಲಾಗುವುದಿಲ್ಲ ಎಂಬ ಭಾರತದ ಚುನಾವಣಾ ಆಯೋಗದ (Election Commission of India – ECI) ನಿಲುವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಎತ್ತಿ ಹಿಡಿದಿದೆ. ಅಲ್ಲದೇ ಅದನ್ನು ಸ್ವತಂತ್ರವಾಗಿ ಪರಿಶೀಲಿಸಬೇಕು ಎಂದು ಒತ್ತಿ ಹೇಳಿದೆ. ಜೊತೆಗೆ ಆಧಾರ್ ಕಾರ್ಡ್ ಪೌರತ್ವದ ಪುರಾವೆಯಾಗಿ ಸ್ವೀಕರಿಸಲು ಸಾಧ್ಯವಿಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಾರಾಂಶ ಪರಿಷ್ಕರಣೆ (Special Summary Revision – SIR) ಅನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ಈ ಅಭಿಪ್ರಾಯವನ್ನು ನೀಡಿದೆ.
ಆಧಾರ್ ಅನ್ನು ಪೌರತ್ವದ ನಿರ್ಣಾಯಕ ಪುರಾವೆಯಾಗಿ ಸ್ವೀಕರಿಸಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ಹೇಳುವುದು ಸರಿಯಾಗಿದೆ. ಅದನ್ನು ಪರಿಶೀಲಿಸಬೇಕಾಗಿದೆ” ಎಂದು ನ್ಯಾಯಮೂರ್ತಿ ಕಾಂತ್ ಅರ್ಜಿದಾರರ ಪರವಾಗಿ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಅವರಿಗೆ ತಿಳಿಸಿದರು.
ವಿಧಾನಸಭೆಯಲ್ಲೂ ಧರ್ಮಸ್ಥಳ ಪ್ರಕರಣ ಸದ್ದು: ಚರ್ಚೆಗೆ ಅವಕಾಶ ಕೊಡುವಂತೆ ಬಿಜೆಪಿ ಸದಸ್ಯರ ಪಟ್ಟು