ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸುವ ಪ್ರಯತ್ನದ ಭಾಗವಾಗಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಹೊಸ ಅಭಿಯಾನವನ್ನು ಆರಂಭಿಸಿದ್ದಾರೆ.
‘ನಿಮ್ಮ ಮುಖ್ಯಮಂತ್ರಿಯನ್ನು ಆರಿಸಿ’ ಅಭಿಯಾನವು ರಾಜ್ಯದಲ್ಲಿ ಆಕ್ರಮಣಕಾರಿಯಾಗಿ ಪ್ರಚಾರ ಮಾಡುತ್ತಿದ್ದಾರೆ. ರ್ಯಾಲಿಗಳು, ಮೆರವಣಿಗೆಗಳು ಸೇರಿದಂತೆ ಅನೇಕ ಸಭೆ ಸಮಾರಂಭಗಳನ್ನು ನಡೆಸುತ್ತಿದ್ದಾರೆ.
We want the people of Gujarat to tell us who should be the next CM. We're issuing a number and an email id. You can send your opinions on it until 5 pm on 3rd Nov. We'll announce the result on 4th Nov: Delhi CM and AAP national convener Arvind Kejriwal, in Surat, Gujarat pic.twitter.com/A7kxZdWZ1x
— ANI (@ANI) October 29, 2022
ಉಚಿತ ವಿದ್ಯುತ್, ಉತ್ತಮ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳಂತಹ ಚುನಾವಣಾ ಪೂರ್ವ ಭರವಸೆಗಳನ್ನು ದೆಹಲಿ ಮುಖ್ಯಮಂತ್ರಿಗಳು ನಡೆಸುತ್ತಿದ್ದಾರೆ.
182 ಸದಸ್ಯ ಬಲದ ಗುಜರಾತ್ ವಿಧಾನಸಭೆಗೆ ಈ ವರ್ಷಾಂತ್ಯಕ್ಕೆ ಚುನಾವಣೆ ನಡೆಯಲಿದೆ. ಆದರೆ, ಮತದಾನದ ಬಗ್ಗೆ ಇನ್ನಷ್ಟೇ ಘೋಷಣೆಯಾಗಬೇಕಿದೆ.