ನವದೆಹಲಿ : ದೆಹಲಿ ವಕ್ಫ್ ಮಂಡಳಿಯಲ್ಲಿನ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಎಎಪಿ ಶಾಸಕ ಅಮಾನತುಲ್ಲಾ ಖಾನ್ಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸೆಪ್ಟೆಂಬರ್ 16 ರಂದು ಖಾನ್ ಅವರ ನಿವಾಸದ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸಿತ್ತು.
Delhi's Rouse Avenue Court grants bail to AAP MLA Amanatullah Khan, in a case connected with alleged irregularities in appointment, misappropriation of funds and misuse of official position as chairman of the Delhi Waqf Board.
— ANI (@ANI) September 28, 2022
ಎಫ್ಐಆರ್ ಪ್ರಕಾರ, ಖಾನ್ ಅವರು ದೆಹಲಿ ವಕ್ಫ್ ಮಂಡಳಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾಗ, ಎಲ್ಲಾ ನಿಯಮಗಳು ಮತ್ತು ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ 32 ಜನರನ್ನು ಅಕ್ರಮವಾಗಿ ನೇಮಕ ಮಾಡಿಕೊಂಡಿದ್ದಾರೆ ಎಂದು ಆರೋಪ ೆಎದುರಿಸುತ್ತಿದ್ದಾರೆ.