ಅಮೃತಸರದ ರೆಸಾರ್ಟ್‌ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಸರಪಂಚರೊಬ್ಬರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಬಲಿಪಶು, ವಾಲ್ಟೋಹಾದ ಜರ್ನೈಲ್ ಸಿಂಗ್ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ಈ ವೇಳೆ ತೀವ್ರ ರಕ್ತಸ್ತ್ರಾವದಿಂದಾಗಿ ಎಎಪಿ ಸರಪಂಚ್ ಜರ್ನೈಲ್ ಸಿಂಗ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Amritsar, Punjab: An AAP sarpanch, Jarnail Singh of Valtoha, was shot dead during a wedding at an Amritsar resort by two outsiders. He had survived three previous attacks pic.twitter.com/kYba3fz3q6
— IANS (@ians_india) January 4, 2026
ಅಮೃತಸರ ಪೊಲೀಸ್ ಆಯುಕ್ತರ ಪ್ರಕಾರ, ದಾಳಿಕೋರರು ಹೊರಗಿನವರು. ಆರೋಪಿಗಳನ್ನು ಗುರುತಿಸಲಾಗಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಈ ವಿಷಯದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.








