ಬೆಂಗಳೂರು: ಜೆಡಿಎಸ್ ಪಕ್ಷದ ಬಳಿಕ, ಈಗ ಮುಂಬರುವಂತ ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಆಮ್ ಆದ್ಮಿ ಪಕ್ಷದಿಂದ ನಾಳೆ ಮಧ್ಯಾಹ್ನ 12.30ಕ್ಕೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುತ್ತಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಮಾಹಿತಿ ನೀಡಿದ್ದು, ಮುಂಬರುವ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಧ್ಯಾಹ್ನ 12.30ಕ್ಕೆ ಬಿಡುಗಡೆ ಮಾಡಲಾಗುತ್ತಿರೋದಾಗಿ ತಿಳಿಸಿದ್ದಾರೆ.
ನಾಳೆ ಮಧ್ಯಾಹ್ನ ಬೆಂಗಳೂರಿನ ಕುಮಾರ ಪಾರ್ಕ್ ವೆಸ್ಟ್ ರಸ್ತೆಯ ರೈಲ್ವೆ ಪ್ಯಾರಲರ್ ರಸ್ತೆಯಲ್ಲಿರುವಂತ ಅಮ್ ಆದ್ಮಿ ಪಾರ್ಟಿ ಕಚೇರಿಯಲ್ಲಿ ಮೊದಲ ಹುರಿಯಾಳುಗಳ ಪಟ್ಟಿಯನ್ನು ರಿಲೀಸ್ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ನಾಳೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕಾರ್ಯಕ್ರಮದಲ್ಲಿ, ಪಕ್ಷದ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಸೇರಿದಂತೆ ಹಲವು ನಾಯಕರುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಅಂದಹಾಗೇ ನಾಳೆ ಎಎಪಿ ಪಕ್ಷದಿಂದ ಮುಂಬರುವಂತ ವಿಧಾನಸಭಾ ಚುನಾವಣೆಗೆ 80 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದೆ ಎಂಬುದಾಗಿ ಹೇಳಲಾಗುತ್ತಿದೆ. ಆ ಬಗ್ಗೆ ನಾಳೆಯವರೆಗೆ ಕಾದು ನೋಡಬೇಕಿದೆ.
BIG NEWS: ಚೆನ್ನಗಿರಿಯಲ್ಲಿ ಬಿಜೆಪಿ vs ಬಿಜೆಪಿ ನಡುವೆ ತಾರಕಕ್ಕೇರಿದ ಸಮರ: ಅರ್ಧಕ್ಕೆ ನಿಂತ ವಿಜಯಸಂಕಲ್ಪ ಯಾತ್ರೆ
ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್: ಸಹಾಯ ಧನ ವಿಸ್ತರಣೆಗೆ ಕ್ರಮ – ಸಿಎಂ ಬೊಮ್ಮಾಯಿ